ಔರಾದ್ (ಬೀದರ್ ಜಿಲ್ಲೆ): ತಾಲ್ಲೂಕಿನ ಜಮಗಿ–ಸೊರಳ್ಳಿ ಮಾರ್ಗದಲ್ಲಿ ಬೈಕ್ ಮೇಲೆ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದು, ಆತನಿಂದ ₹14 ಲಕ್ಷ ಮೌಲ್ಯದ ಗಾಂಜಾನು ವಶಕ್ಕೆ ಪಡೆದಿದ್ದಾರೆ.
ಸಂಗಾರೆಡ್ಡಿ ಜಿಲ್ಲೆಯ ನಾರಾಯಣಖೇಡ್ ತಾಲ್ಲೂಕಿನ ಖರಸಗುತ್ತಿ ಗ್ರಾಮದ ಸುನೀಲ್ ರಾಠೋಡ್ ಬಂಧಿತ ಆರೋಪಿ. ಈತನಿಂದ 14.87 ಕೆ.ಜಿ ಗಾಂಜಾ ಹಾಗೂ ಬೈಕ್ ಜಪ್ತಿ ಮಾಡಲಾಗಿದೆ.
ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯಿಂದ ಕಡಿಮೆ ಬೆಲೆಗೆ ಗಾಂಜಾ ತಂದು ಮುಂಬೈಗೆ ತೆಗೆದುಕೊಂಡು ಹೋಗಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವುದಾಗಿ ಆರೋಪಿಯು ವಿಚಾರಣೆ ವೇಳೆ ಮಾಹಿತಿ ನೀಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಸಂತಪೂರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಿಎಸ್‌ಐ ನಂದಕುಮಾರ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.