ADVERTISEMENT

ಅಂಧರಿಗೆ ಸಂಗೀತ ಧಾರೆ ಎರೆದ ಗವಾಯಿ: ಮಲ್ಲಿಕಾರ್ಜುನ ನಾಗಮಾರಪಳ್ಳಿ

​ಪ್ರಜಾವಾಣಿ ವಾರ್ತೆ
Published 1 ಜುಲೈ 2021, 14:16 IST
Last Updated 1 ಜುಲೈ 2021, 14:16 IST
ಬೀದರ್‌ನ ಸಪ್ತಸ್ವರ ಸಂಗೀತ ಮಹಾವಿದ್ಯಾಲಯದಲ್ಲಿ ಗಾನಯೋಗಿ ಪಂಚಾಕ್ಷರ ಗವಾಯಿ ಅವರ 77ನೇ ಪುಣ್ಯತಿಥಿ ಕಾರ್ಯಕ್ರಮ ನಡೆಯಿತು
ಬೀದರ್‌ನ ಸಪ್ತಸ್ವರ ಸಂಗೀತ ಮಹಾವಿದ್ಯಾಲಯದಲ್ಲಿ ಗಾನಯೋಗಿ ಪಂಚಾಕ್ಷರ ಗವಾಯಿ ಅವರ 77ನೇ ಪುಣ್ಯತಿಥಿ ಕಾರ್ಯಕ್ರಮ ನಡೆಯಿತು   

ಬೀದರ್: ಪಂಚಾಕ್ಷರ ಗವಾಯಿ ಅವರು ಅಂಧರು, ಅನಾಥರಿಗೆ ಸಂಗೀತ ವಿದ್ಯೆ ಧಾರೆ ಎರೆದಿದ್ದರು. ಅವರ ಬಾಳಿಗೆ ಬೆಳಕಾಗಿದ್ದರು ಎಂದು ಸಪ್ತಸ್ವರ ಸಂಗೀತ ಮಹಾವಿದ್ಯಾಲಯದ ಅಧ್ಯಕ್ಷ ಮಲ್ಲಿಕಾರ್ಜುನ ನಾಗಮಾರಪಳ್ಳಿ ಹೇಳಿದರು.

ನಗರದ ಸಪ್ತಸ್ವರ ಸಂಗೀತ ಮಹಾವಿದ್ಯಾಲಯದಲ್ಲಿ ನಡೆದ ಗಾನಯೋಗಿ ಪಂಚಾಕ್ಷರ ಗವಾಯಿ ಅವರ 77ನೇ ಪುಣ್ಯತಿಥಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಗವಾಯಿ ಅವರು ಸಂಗೀತವನ್ನೇ ಉಸಿರಾಗಿಸಿಕೊಂಡಿದ್ದರು. ಸಂಗೀತದ ಬೆಳವಣಿಗೆಗೆ ಶ್ರಮಿಸಿದ್ದರು ಎಂದು ತಿಳಿಸಿದರು.
ಸಂಗೀತ ಪಾಠಶಾಲೆ ಮಕ್ಕಳಿಂದ ಗಾಯನ ನಡೆಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.