ADVERTISEMENT

ಭ್ರೂಣ ಲಿಂಗ ಪತ್ತೆ ಕಾನೂನು ಬಾಹಿರ: ಸ್ತ್ರೀ ರೋಗ ವಿಭಾಗದ ಮುಖ್ಯಸ್ಥೆ ಡಾ.ಉಮಾ

​ಪ್ರಜಾವಾಣಿ ವಾರ್ತೆ
Published 25 ಜನವರಿ 2024, 5:38 IST
Last Updated 25 ಜನವರಿ 2024, 5:38 IST
ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಅಂಗವಾಗಿ ಬೀದರ್‌ನ ಬ್ರಿಮ್ಸ್‌ನಲ್ಲಿ ರೋಗಿಗಳಿಗೆ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಮಹೇಶ ಬಿರಾದಾರ, ಸ್ತ್ರೀ ರೋಗ ವಿಭಾಗದ ಮುಖ್ಯಸ್ಥೆ ಡಾ. ಉಮಾ ಬಿ. ದೇಶಮುಖ ಹಣ್ಣು ವಿತರಿಸಿದರು
ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಅಂಗವಾಗಿ ಬೀದರ್‌ನ ಬ್ರಿಮ್ಸ್‌ನಲ್ಲಿ ರೋಗಿಗಳಿಗೆ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಮಹೇಶ ಬಿರಾದಾರ, ಸ್ತ್ರೀ ರೋಗ ವಿಭಾಗದ ಮುಖ್ಯಸ್ಥೆ ಡಾ. ಉಮಾ ಬಿ. ದೇಶಮುಖ ಹಣ್ಣು ವಿತರಿಸಿದರು   

ಬೀದರ್‌: ಇಲ್ಲಿನ ಬೀದರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಬ್ರಿಮ್ಸ್‌) ಬೋಧಕ ಆಸ್ಪತ್ರೆಯಲ್ಲಿ ಬುಧವಾರ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ ಆಚರಿಸಲಾಯಿತು. 

ಸ್ತ್ರೀ ರೋಗ ವಿಭಾಗದ ಮುಖ್ಯಸ್ಥೆ ಡಾ.ಉಮಾ ಬಿ. ದೇಶಮುಖ ಮಾತನಾಡಿ, ಕಾಯ್ದೆ ಪ್ರಕಾರ ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ಕಾನೂನು ಬಾಹಿರ. ಆದಕಾರಣ ಯಾರೂ ಕೂಡ ಸ್ಕ್ಯಾನಿಂಗ್‌ ಮೂಲಕ ಲಿಂಗಪತ್ತೆ ಮಾಡಬಾರದು. ಅದಕ್ಕೆ ಕಾನೂನಿನಲ್ಲಿ ಶಿಕ್ಷೆ ಇದೆ ಎಂದು ಹೇಳಿದರು.

ಹೆಣ್ಣು ಭ್ರೂಣ ಹತ್ತೆ ಮಹಾಪಾಪ. ಹೀಗೆ ಮಾಡುವುದರಿಂದ ಸಮಾಜದಲ್ಲಿ ಹೆಣ್ಣು ಮಕ್ಕಳ ‌ಸಂಖ್ಯೆ ಕಡಿಮೆಯಾಗಿ ಲಿಂಗ ಅಸಮಾನತೆಗೆ ಕಾರಣವಾಗುತ್ತದೆ. ಪ್ರತಿಯೊಬ್ಬರೂ ‌ಹುಟ್ಟಿದ ಹೆಣ್ಣು ಮಕ್ಕಳಿಗೆ ಆದರಪೂರ್ವಕವಾಗಿ ಸ್ವಾಗತಿಸಿ ಗೌರವಿಸಬೇಕು. ಅವರಿಗೂ ಕೂಡ ಗಂಡು ಮಕ್ಕಳ ಹಾಗೆ ಸಮಾಜದಲ್ಲಿ ಸಮಾನ ಅವಕಾಶ ಕಲ್ಪಿಸಿಕೊಡಬೇಕು ಎಂದು ತಿಳಿಸಿದರು.

ADVERTISEMENT

ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಮಹೇಶ ಬಿರಾದಾರ ಮಾತನಾಡಿ, ಹೆಣ್ಣು ಮಕ್ಕಳಿಗೆ ಶಿಕ್ಷಣ ಕೊಡುವುದು, ಬಾಲ್ಯವಿವಾಹ, ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಜಾಗೃತಿ ಮೂಡಿಸಬೇಕು. ಗಂಡು ಮಕ್ಕಳಂತೆ ಹೆಣ್ಣು ಮಕ್ಕಳಿಗೂ ಸಮಾನ ಅವಕಾಶಗಳನ್ನು ಕೊಡಬೇಕು ಎಂದು ಹೇಳಿದರು.

ಸ್ತ್ರೀ ರೋಗ ತಜ್ಞ ಡಾ.ಮೀನಲ ವರ್ಧನ, ಡಾ.ಸಂಗೀತಾ ಹಲಮಡಗೆ, ಡಾ.ರಾಮೇಶ್ವರಿ, ನರ್ಸ್‌ಗಳಾದ ಶಾಂತಾ ಕೆ., ಸುಧಾ ಚಂದನ, ಅರುಣಾ, ಸಂಗೀತಾ, ಆಪ್ತ ಸಮಾಲೋಚಕಿ ವಿದ್ಯಾ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.