ADVERTISEMENT

ಪ್ರತಿಯೊಬ್ಬರು ಲಸಿಕೆ ಹಾಕಿಸಿಕೊಳ್ಳಿ: ಜಿಲ್ಲಾಧಿಕಾರಿ ರಾಮಚಂದ್ರನ್‌ ಆರ್‌

ಅಮೃತ ಮಹೋತ್ಸವದ 3ನೇ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 21 ಜೂನ್ 2021, 13:45 IST
Last Updated 21 ಜೂನ್ 2021, 13:45 IST
ಬೀದರ್‌ನ ಬರೀದ್‌ಶಾಹಿ ಉದ್ಯಾನದಲ್ಲಿ ಆಯೋಜಿಸಿದ್ದ ಭಾರತದ 75ನೇ ಸ್ವಾತಂತ್ರ‍್ಯೋತ್ಸವ ಅಮೃತ ಮಹೋತ್ಸವದ ಮೂರನೇ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ರಾಮಚಂದ್ರನ್‌ ಆರ್‌. ಉದ್ಘಾಟಿಸಿದರು
ಬೀದರ್‌ನ ಬರೀದ್‌ಶಾಹಿ ಉದ್ಯಾನದಲ್ಲಿ ಆಯೋಜಿಸಿದ್ದ ಭಾರತದ 75ನೇ ಸ್ವಾತಂತ್ರ‍್ಯೋತ್ಸವ ಅಮೃತ ಮಹೋತ್ಸವದ ಮೂರನೇ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ರಾಮಚಂದ್ರನ್‌ ಆರ್‌. ಉದ್ಘಾಟಿಸಿದರು   

ಬೀದರ್: ‘ಕೋವಿಡ್‌ ಪ್ರಕರಣಗಳು ಕಡಿಮೆಯಾಗಿವೆ. ಆದರೆ, ಅಪಾಯ ತಪ್ಪಿಲ್ಲ. ಕೋವಿಡ್‌ ನಿಯಂತ್ರಿಸಲು ಪ್ರತಿಯೊಬ್ಬರು ಲಸಿಕೆ ಪಡೆದುಕೊಳ್ಳ ಬೇಕು’ ಎಂದು ಜಿಲ್ಲಾಧಿಕಾರಿ ರಾಮಚಂದ್ರನ್‌ ಆರ್‌. ಹೇಳಿದರು.

ನಗರದ ಬರೀದ್‌ಶಾಹಿ ಉದ್ಯಾನ ದಲ್ಲಿ ಸೋಮವಾರ ಆಯೋಜಿಸಿದ್ದ ಭಾರತದ 75ನೇ ಸ್ವಾತಂತ್ರ‍್ಯೋತ್ಸವ ಅಮೃತ ಮಹೋತ್ಸವದ ಮೂರನೇ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘45 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ ಲಸಿಕೆ ಪಡೆಯಬೇಕು. 18 ವರ್ಷ ಮೇಲ್ಪಟ್ಟವರಿಗೂ ಇಂದಿನಿಂದ ಲಸಿಕೆ ಕೊಡಲಾಗುತ್ತಿದೆ’ ಎಂದು ತಿಳಿಸಿದರು.

ADVERTISEMENT

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಹೀರಾ ನಸೀಮ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಶಿಂಧೆ ಇದ್ದರು.

ಕಲಾವಿದರಾದ ಮಲ್ಲಿಕಾರ್ಜುನ ಸ್ವಾಮಿ ಮತ್ತು ತಂಡದವರು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ದೇವಿ ದಾಸ ಕಾರ್ಯಕ್ರಮ ನಿರೂಪಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.