ADVERTISEMENT

ಜಿ.ಪಂ, ತಾ.ಪಂ ಚುನಾವಣೆಗೆ ಸಿದ್ಧರಾಗಿ

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಶಿವಾನಂದ ಮಂಠಾಳಕರ್

​ಪ್ರಜಾವಾಣಿ ವಾರ್ತೆ
Published 26 ಜುಲೈ 2021, 15:17 IST
Last Updated 26 ಜುಲೈ 2021, 15:17 IST
ಬೀದರ್ ತಾಲ್ಲೂಕಿನ ಚಾಂಬೋಳ ಗ್ರಾಮದಲ್ಲಿ ನಡೆದ ಬಿಜೆಪಿ ಬೀದರ್ ಗ್ರಾಮೀಣ ಮಂಡಲ ಕಾರ್ಯಕಾರಿಣಿ ಸಭೆಯನ್ನು ಪಕ್ಷದ ವಿಭಾಗೀಯ ಸಹ ಪ್ರಭಾರಿ ಈಶ್ವರಸಿಂಗ್ ಠಾಕೂರ್ ಉದ್ಘಾಟಿಸಿದರು. ಪೀರಪ್ಪ ಔರಾದೆ, ಶಿವಾನಂದ ಮಂಠಾಳಕರ್, ಶಿವರಾಜ ಗಂದಗೆ, ಅಶೋಕ ಹೊಕ್ರಾಣೆ, ವಿಜಯಕುಮಾರ ಎಸ್. ಪಾಟೀಲ ಗಾದಗಿ ಇದ್ದರು
ಬೀದರ್ ತಾಲ್ಲೂಕಿನ ಚಾಂಬೋಳ ಗ್ರಾಮದಲ್ಲಿ ನಡೆದ ಬಿಜೆಪಿ ಬೀದರ್ ಗ್ರಾಮೀಣ ಮಂಡಲ ಕಾರ್ಯಕಾರಿಣಿ ಸಭೆಯನ್ನು ಪಕ್ಷದ ವಿಭಾಗೀಯ ಸಹ ಪ್ರಭಾರಿ ಈಶ್ವರಸಿಂಗ್ ಠಾಕೂರ್ ಉದ್ಘಾಟಿಸಿದರು. ಪೀರಪ್ಪ ಔರಾದೆ, ಶಿವಾನಂದ ಮಂಠಾಳಕರ್, ಶಿವರಾಜ ಗಂದಗೆ, ಅಶೋಕ ಹೊಕ್ರಾಣೆ, ವಿಜಯಕುಮಾರ ಎಸ್. ಪಾಟೀಲ ಗಾದಗಿ ಇದ್ದರು   


ಜನವಾಡ: ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆ ವರ್ಷಾಂತ್ಯಕ್ಕೆ ನಡೆಯುವ ಸಾಧ್ಯತೆ ಇದೆ. ಪಕ್ಷದ ಮುಖಂಡರು, ಕಾರ್ಯಕರ್ತರು ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಶಿವಾನಂದ ಮಂಠಾಳಕರ್ ಹೇಳಿದರು.


ಬೀದರ್ ತಾಲ್ಲೂಕಿನ ಚಾಂಬೋಳ ಗ್ರಾಮದಲ್ಲಿ ನಡೆದ ಬಿಜೆಪಿ ಬೀದರ್ ಗ್ರಾಮೀಣ ಮಂಡಲ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.


ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕರಡು ಮೀಸಲಾತಿ ಪ್ರಕಟಗೊಂಡಿದ್ದು, ಶೀಘ್ರದಲ್ಲಿ ಅಂತಿಮ ಮೀಸಲಾತಿ ಬರಲಿದೆ. ಚುನಾವಣೆಯಲ್ಲಿ ಅಧಿಕ ಸ್ಥಾನಗಳನ್ನು ಗೆಲ್ಲುವ ನಿಟ್ಟಿನಲ್ಲಿ ಯೋಜನೆ ರೂಪಿಬೇಕಾಗಿದೆ. ಕೇಂದ್ರ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದೆ. ಸರ್ಕಾರಗಳ ಸಾಧನೆಗಳ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

ADVERTISEMENT


ಅಧ್ಯಕ್ಷತೆ ವಹಿಸಿದ್ದ ಮಂಡಲ ಅಧ್ಯಕ್ಷ ರಾಜೇಂದ್ರ ಪೂಜಾರಿ ಮಾತನಾಡಿ, ಮಂಡಲ ವ್ಯಾಪ್ತಿಗೆ ಬರುವ ಎಲ್ಲ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳಲ್ಲಿ ಪಕ್ಷ ಸಕ್ರಿಯವಾಗಿ ಕೆಲಸ ಮಾಡುತ್ತಿದೆ. ನಿಷ್ಠಾವಂತ ಹಾಗೂ ಪ್ರಾಮಾಣಿಕ ಕಾರ್ಯಕರ್ತರಿಗೆ ಟಿಕೆಟ್ ನೀಡುವ ನಿಟ್ಟಿನಲ್ಲಿ ಪಕ್ಷ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.


ಪಕ್ಷದ ವಿಭಾಗೀಯ ಸಹ ಪ್ರಭಾರಿ ಈಶ್ವರಸಿಂಗ್ ಠಾಕೂರ್, ಜಿಲ್ಲಾ ಪ್ರಭಾರಿ ವಿದ್ಯಾಸಾಗರ ಶಾಬಾದ್, ರೈಲ್ವೆ ಪ್ರಯಾಣಿಕರ ಸೇವಾ ಸಮಿತಿ ಸದಸ್ಯ ಶಿವರಾಜ ಗಂದಗೆ, ಎಪಿಎಂಸಿ ಅಧ್ಯಕ್ಷ ವಿಜಯಕುಮಾರ ಆನಂದೆ, ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಪೀರಪ್ಪ ಔರಾದೆ, ಪ್ರಧಾನ ಕಾರ್ಯದರ್ಶಿಗಳಾದ ಅಶೋಕ ಹೊಕ್ರಾಣೆ, ಮಲ್ಲಿಕಾರ್ಜುನ ಕುಂಬಾರ, ಕಾರ್ಯದರ್ಶಿ ವಿಜಯಕುಮಾರ ಎಸ್. ಪಾಟೀಲ ಗಾದಗಿ, ಮಂಡಲ ಉಸ್ತುವಾರಿ ಶಂಕರ ನಗಾದೆ, ರಾಜಕುಮಾರ ನ್ಯಾಮತಾಬಾದ್, ಪ್ರಮುಖರಾದ ಉಪೇಂದ್ರ ದೇಶಪಾಂಡೆ, ರಾಜಕುಮಾರ ಚಿಲ್ಲರ್ಗಿ, ಬಾಲಾಜಿ ಚವಾಣ್, ರವಿ, ಪಂಢರಿ ಲದ್ದೆ, ರವಿ ಭಂಗೆ, ತಾರಾಬಾಯಿ ರಾಠೋಡ್, ರಾಮಶೆಟ್ಟಿ ಬಿರಾದಾರ, ದೀಪಕ ಗಾದಗೆ, ರಮೇಶ, ಶಿವಕುಮಾರ ಸ್ವಾಮಿ, ದೇವೇಂದ್ರ ಸಾಧು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.