ADVERTISEMENT

ಡಿ.30 ರಂದು ಗಿರಿಜನ ಉತ್ಸವ

​ಪ್ರಜಾವಾಣಿ ವಾರ್ತೆ
Published 28 ಡಿಸೆಂಬರ್ 2019, 10:36 IST
Last Updated 28 ಡಿಸೆಂಬರ್ 2019, 10:36 IST

ಬೀದರ್: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಡಿಸೆಂಬರ್ 30ರ ಮಧ್ಯಾಹ್ನ 12ಕ್ಕೆ ಔರಾದ್ ತಾಲ್ಲೂಕಿನ ಚಿಂತಾಕಿ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಗಿರಿಜನ ಉತ್ಸವ ನಡೆಯಲಿದೆ.

ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಉದ್ಘಾಟಿಸುವರು. ಅಕ್ಕಮಹಾದೇವಿ ಕಾಲೇಜಿನ ಪ್ರಾಚಾರ್ಯ ಪ್ರೊ.ಎಸ್.ಜಿ.ಹುಗ್ಗಿ ಪಾಟೀಲ ‘ಗಿರಿಜನರ ಬದುಕು ಮತ್ತು ಕಲೆಗಳ’ ಕುರಿತು ಉಪನ್ಯಾಸ ನೀಡುವರು.

ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಗೀತಾ ಚಿದ್ರಿ, ಸಂಸದ ಭಗವಂತ ಖೂಬಾ, ಶಾಸಕರಾದ ರಾಜಶೇಖರ ಪಾಟೀಲ, ಈಶ್ವರ ಖಂಡ್ರೆ, ಬಂಡೆಪ್ಪ ಕಾಶೆಂಪೂರ, ರಹೀಂ ಖಾನ್, ಬಿ.ನಾರಾಯಣರಾವ್‌, ವಿಧಾನ ಪರಿಷತ್ ಸದಸ್ಯರಾದ ರಘುನಾಥರಾವ್‌ ಮಲ್ಕಾಪೂರೆ, ಶರಣಪ್ಪ ಮಟ್ಟೂರ್, ವಿಜಯಸಿಂಗ್, ಅರವಿಂದಕುಮಾರ ಅರಳಿ, ಚಂದ್ರಶೇಖರ ಪಾಟೀಲ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಲಕ್ಷ್ಮಣರಾವ್ ಬುಳ್ಳಾ, ಜಿಲ್ಲಾಧಿಕಾರಿ ಎಚ್.ಆರ್.ಮಹಾದೇವ, ಜಿಲ್ಲಾ ಪಂಚಾಯಿತಿ ಸಿಇಒ ಗ್ಯಾನೇಂದ್ರಕುಮಾರ ಗಂಗ್ವಾರ್‌, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಶ್ರೀಧರ್, ಔರಾದ್(ಬಿ) ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಸವಿತಾ ಪ್ರಕಾಶ ಪಾಟೀಲ, ಜಿಲ್ಲಾ ಪಂಚಾಯಿತಿ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಸಂಧ್ಯರಾಣಿ ನರೋಟೆ, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ನೆಹರೂ ಬಸವಂತರಾವ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಅನಿಲಕುಮಾರ ಬಿರಾದಾರ ಪಾಲ್ಗೊಳ್ಳುವರು.

ADVERTISEMENT

ಮಾರುತಿ ಚವಾಣ್, ಸುರೇಖಾ ಭೋಸ್ಲೆ, ಮೀನಾ ಚವಾಣ್‌, ಬಾಬುಸಿಂಗ್ ಹಜಾರಿ, ತಾಲ್ಲೂಕು ಪಂಚಾಯಿತಿ ಸದಸ್ಯ ನರಸಾರೆಡ್ಡಿ, ಔರಾದ್‌ ತಾಲ್ಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಉಪಾಧ್ಯಕ್ಷ ಈರಾರೆಡ್ಡಿ ಸೊಬ್ಬಾ, ಚಿಂತಾಕಿ ಗ್ರಾಮ ಪಂಚಾಯಿತಿ ಅಧ್ಯಕ್ಷ ವೀರಾರೆಡ್ಡಿ ಜ್ಞಾನರೆಡ್ಡಿ, ಉಪಾಧ್ಯಕ್ಷೆ ಚನ್ನಮ್ಮ ಗುರಪ್ಪ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಾಣಿಕರಾವ್ ಪಾಟೀಲ, ಔರಾದ್‌ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಟಿ. ಮಂಜುನಾಥ, ಚಿಂತಾಕಿ ಪೊಲೀಸ್ ಠಾಣೆ ಆರಕ್ಷಕ ಉಪ ನಿರೀಕ್ಷಕ ಸೂರ್ಯಕಾಂತ, ಉಪ ತಹಶೀಲ್ದಾರ್‌ ಪುರಂ ಶಾಂತನು, ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಜಗನ್ನಾಥ
ಮೂಲಗೆ, ಪತ್ರಕರ್ತರ ಸಂಘದ ತಾಲ್ಲೂಕು ಅಧ್ಯಕ್ಷ ಶರಣಪ್ಪ ಚಿಟಮೆ, ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಶಿವಾನಂದ ಔರಾದೆ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ತಾನಾಜಿ ಪಾಟೀಲ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಸಿಂಧೆ ಭಾಗವಹಿಸುವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.