
ಪ್ರಜಾವಾಣಿ ವಾರ್ತೆ
ಬೀದರ್: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಎಂ. ಅವರನ್ನು ಜಿಲ್ಲೆಯಿಂದ ವರ್ಗಾವಣೆಗೊಳಿಸಿ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ.
ಇನ್ನು, ಶಿಲ್ಪಾ ಅವರ ಜಾಗಕ್ಕೆ ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷಾ ವಿಭಾಗದ ನಿಯಂತ್ರಕ ಡಾ.ಗಿರೀಶ ದಿಲೀಪ ಬಡೋಲೆ ಅವರನ್ನು ಸರ್ಕಾರ ನೇಮಕ ಮಾಡಿದೆ. ಸರ್ಕಾರ ಆದೇಶ ಹೊರಡಿಸಿದ ದಿನವೇ ಗಿರೀಶ ಅವರು ಬೀದರ್ ಜಿಲ್ಲಾ ಪಂಚಾಯಿತಿ ಸಿಇಒ ಆಗಿ ಮಂಗಳವಾರ ಅಧಿಕಾರ ಸ್ವೀಕರಿಸಿದರು. ಶಿಲ್ಪಾ ಅವರನ್ನು ಬಿಎಂಟಿಸಿ ನಿರ್ದೇಶಕಿಯನ್ನಾಗಿ ನೇಮಿಸಿ ಹೊಸ ಜವಾಬ್ದಾರಿಯನ್ನು ಸರ್ಕಾರ ವಹಿಸಿದೆ. 2022ರ ಜೂನ್‌ನಲ್ಲಿ ಶಿಲ್ಪಾ ಅವರು ಬೀದರ್ ಜಿ.ಪಂ ಸಿಇಒ ಆಗಿ ನೇಮಕಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.