ಹುಲಸೂರ: ತಾಲ್ಲೂಕಿನ ತೊಗಲೂರ ಗ್ರಾಮದ ಪಲ್ಲವಿ ರಾಜೇಂದ್ರ ದೇವಗೊಂಡ (13) ಎಂಬ ಬಾಲಕಿಯು ವಿದ್ಯುತ್ ಸ್ಪರ್ಶದಿಂದ ಭಾನುವಾರ ಸಾವಿಗೀಡಾಗಿದ್ದಾಳೆ.
ಭಾನುವಾರ ಬೆಳಿಗ್ಗೆ ಮನೆಯಲ್ಲಿನ ವಿದ್ಯುತ್ ಮೋಟರ್‌ನಿಂದ ನೀರು ಸರಬರಾಜು ಮಾಡುವ ಸಂದರ್ಭದಲ್ಲಿ ವಿದ್ಯುತ್ ತಗುಲಿ ಸಾವನ್ನಪ್ಪಿದ ದಾರುಣ ಘಟನೆ ಸಂಭವಿಸಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.
ಈ ಘಟನೆ ಕುರಿತು ಹುಲಸೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.