ADVERTISEMENT

ಪೌರ ಕಾರ್ಮಿಕರು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿ

ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಶಾಸಕ ರಹೀಂ ಖಾನ್ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 8 ಡಿಸೆಂಬರ್ 2022, 13:41 IST
Last Updated 8 ಡಿಸೆಂಬರ್ 2022, 13:41 IST
ಬೀದರ್‌ನ ನಗರದ ಪೂಜ್ಯ ಚನ್ನಬಸವ ಪಟ್ಟದೇವರು ರಂಗಮಂದಿರದಲ್ಲಿ ಏರ್ಪಡಿಸಿದ್ದ ಸಫಾಯಿ ಕರ್ಮಚಾರಿ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮತ್ತು ಎಂ.ಎಸ್. ಕಾಯ್ದೆ 2013ರಂತೆ ಸಫಾಯಿ ಕರ್ಮಚಾರಿಗಳಿಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯಿತಿ ಸಿಇಒ ಶಿಲ್ಪಾ ಉದ್ಘಾಟಿಸಿದರು. ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಿಶೋರ ಬಾಬು ಇದ್ದಾರೆ
ಬೀದರ್‌ನ ನಗರದ ಪೂಜ್ಯ ಚನ್ನಬಸವ ಪಟ್ಟದೇವರು ರಂಗಮಂದಿರದಲ್ಲಿ ಏರ್ಪಡಿಸಿದ್ದ ಸಫಾಯಿ ಕರ್ಮಚಾರಿ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮತ್ತು ಎಂ.ಎಸ್. ಕಾಯ್ದೆ 2013ರಂತೆ ಸಫಾಯಿ ಕರ್ಮಚಾರಿಗಳಿಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯಿತಿ ಸಿಇಒ ಶಿಲ್ಪಾ ಉದ್ಘಾಟಿಸಿದರು. ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಿಶೋರ ಬಾಬು ಇದ್ದಾರೆ   

ಬೀದರ್‌: ದೇಶದ ಸಂವಿಧಾನದಲ್ಲಿ ಪ್ರತಿಯೊಬ್ಬರಿಗೂ ಸಮಾನ ಸ್ಥಾನಮಾನ ಕಲ್ಪಿಸಲಾಗಿದೆ. ಪೌರ ಕಾರ್ಮಿಕರು ಇದರ ಪೂರ್ಣ ಲಾಭ ಪಡೆದು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ ಅಧಿಕಾರಿಗಳನ್ನು ಮಾಡಬೇಕು. ಸಮಾಜದಲ್ಲಿ ಗೌರವಯುತವಾಗಿ ಬಾಳಬೇಕು ಎಂದು ಶಾಸಕ ರಹೀಂ ಖಾನ್ ಹೇಳಿದರು.
ನಗರದ ಪೂಜ್ಯ ಚನ್ನಬಸವ ಪಟ್ಟದೇವರು ರಂಗ ಮಂದಿರದಲ್ಲಿ ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗ ಮತ್ತು ಅಭಿವೃದ್ಧಿ ನಿಗಮ ಹಾಗೂ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಸಫಾಯಿ ಕರ್ಮಚಾರಿ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮತ್ತು ಎಂ.ಎಸ್. ಕಾಯ್ದೆ 2013ರಂತೆ ಸಫಾಯಿ ಕರ್ಮಚಾರಿಗಳಿಗೆ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.


ಪೌರ ಕಾರ್ಮಿಕರ ಬಗ್ಗೆ ಎಷ್ಟು ಹೇಳಿದರೂ ಕಡಿಮೆಯೇ. ಕಾರಣ ಹಲವು ಸಮಸ್ಯೆಗಳಿದ್ದರೂ ತಮ್ಮ ಕೆಲಸಗಳನ್ನು ಜವಾಬ್ದಾರಿಯುತವಾಗಿ ನಿರ್ವಹಿಸಿಕೊಂಡು ಹೋಗುತ್ತಿದ್ದಾರೆ. ಹಿಂದಿನ ಕಾಲದಲ್ಲಿ ರಾಜನ ಮಗ ರಾಜ ಆಗುತ್ತಿದ್ದ ಆದರೆ ಡಾ. ಬಾಬಾಸಾಹೇಬ ಅಂಬೇಡ್ಕರ ಅವರು ಸವಿಂಧಾನ ರಚಿಸಿದಾಗಿನಿಂದ ಬಡವರ ಮಕ್ಕಳು ಇಂದು ಉನ್ನತ ಹುದ್ದೆಗೆ ಏರಲು ಸಾಧ್ಯವಾಗಿದೆ ಎಂದು ಹೇಳಿದರು.

ಪೌರ ಕಾರ್ಮಿಕರು ತಮ್ಮ ಆರೋಗ್ಯದ ಕಡೆಗೆ ಗಮನ ಹರಿಸಬೇಕು. ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು ಎಂದು ತಿಳಿಸಿದರು.

ADVERTISEMENT


ಜಿಲ್ಲಾಧಿಕಾರಿ ಗೊವಿಂದ ರೆಡ್ಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಹತ್ತು ವರ್ಷ ಕೆಲಸ ಮಾಡಿದ ಸಫಾಯಿ ಕರ್ಮಚಾರಿಗಳ ಸೇವೆಯನ್ನು ಕಾಯಂಗೊಳಿಸಲಾಗಿದೆ. ಇನ್ನೂ ಹತ್ತು ವರ್ಷ ಪೊರೈಸಿದವರಿಗೂ ಕಾಯಂ ನೌಕರರನ್ನಾಗಿ ಮಾಡಲಾಗುವುದು. ಯಾರೂ ಕೆಲಸವನ್ನು ಮಧ್ಯದಲ್ಲಿ ಬಿಟ್ಟು ಹೋಗಬಾರದು ಎಂದರು.

ಗೃಹ ಭಾಗ್ಯ ಯೋಜನೆ ಅಡಿಯಲ್ಲಿ ಪೌರ ಕಾರ್ಮಿಕರಿಗೆ ಮನೆಗಳನ್ನು ನೀಡಲಾಗುತ್ತಿದೆ. ಪೌರ ಕಾರ್ಮಿಕರು ತಮ್ಮ ಮಕ್ಕಳಿಗೂ ಒಳ್ಳೆಯ ಶಿಕ್ಷಣ ಕೊಡಿಸುವ ಮೂಲಕ ಅವರು ಉನ್ನತ ಹುದ್ದೆಗಳನ್ನು ಪಡೆಯುವಂತಾಗಬೇಕು. ಅವರು ಇತರೆ ಮಕ್ಕಳಂತೆ ಓದಿ ಸಮಾಜದಲ್ಲಿ ಮುಂದೆ ಬರಬೇಕು ಎಂದು ಹೇಳಿದರು.

ವಿವಿಧ ತಾಲ್ಲೂಕುಗಳ ಆಗಮಿಸಿದ ಪೌರ ಕಾರ್ಮಿಕರ ಪ್ರತಿಭಾವಂತ ಮಕ್ಕಳಿಗೆ ಗಣ್ಯರಿಂದ ಸನ್ಮಾನಿಸಲಾಯಿತು. ನಂತರ ಸಾಸಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಎಂ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡೆಕ್ಕ ಕಿಶೋರಬಾಬು, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಗಿರೀಶ ರಂಜೋಳಕರ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮೋತಿಲಾಲ್ ಲಮಾಣಿ, ನಗರಸಭೆ ಪೌರಾಯುಕ್ತ ಪ್ರಬುದ್ಧ ಕಾಂಬಳೆ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಸುಭಾಷ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ರಾಮ ಸಿಂಧೆ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಸೋಮಶೇಖರ, ಜಿಲ್ಲೆಯ ಪುರಸಭೆಯ ಮುಖ್ಯಾಧಿಕಾರಿಗಳು ಹಾಗೂ ಪೌರ ಕಾರ್ಮಿಕರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.