ಹುಲಸೂರ: ‘ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ಗಮನದಲ್ಲಿಟ್ಟುಕೊಂಡು ನರೇಗಾ ಯೋಜನೆಯಡಿ ಕಾರ್ಮಿಕರಿಗೆ ಆದ್ಯತೆ ಮೇರೆಗೆ ಕೂಲಿ ಕೆಲಸ ನೀಡಬೇಕು’ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಹೀರಾ ನಸೀಂ ಹೇಳಿದರು.
ಸಚಿವ ಪ್ರಭು ಚವಾಣ್ ಅವರೊಂದಿಗೆ ಶನಿವಾರ ಪಟ್ಟಣದಲ್ಲಿ ರುವ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ತಾಲ್ಲೂಕು ಪಂಚಾಯತಿಯ ನರೇಗಾ ಸಾಹಯಕ ನಿರ್ದೇಶಕ ಜಯಪ್ರಕಾಶ್ ಚವ್ಹಾಣ ಅವರೊಂದಿಗೆ ಸೂಚಿಸಿದರು.
‘ವೈಯಕ್ತಿಕ ಕಾಮಗಾರಿಗಳಾದ ತೆರೆದಬಾವಿ, ಬದು ನಿರ್ಮಾಣ, ಜಾನುವಾರು ಕೊಟ್ಟಿಗೆ ನಿರ್ಮಿಸುವತ್ತ ಗಮನ ಹರಿಸಬೇಕು. ಆದ್ಯತೆ ಮೇರೆಗೆ ಕೆಲಸ ನೀಡಬೇಕು’ ಎಂದು ಸೂಚಿಸಿದರು.
ತಾ.ಪಂ ಇಒ ಖಾಲಿದ್ ಅಲಿ, ಹುಲಸೂರ ಪಿಡಿಒ ಭೀಮಶೆಪ್ಪ ದಂಡಿನ್, ತಾಲ್ಲೂಕು ತಾಂತ್ರಿಕ ಸಂಯೋಜಕ ಮಲ್ಲಿಕಾರ್ಜುನ ನಾವದಗಿ ಹಾಗೂ ತಾಲ್ಲೂಕು ಐಇಸಿ ಸಂಯೋಜಕ ಗಣಪತಿ ಹರಕುಡೆ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.