ADVERTISEMENT

ಬೀದರ್: ದೂರದೃಷ್ಟಿಯ ಬಜೆಟ್ : ಸಂಸದ ಭಗವಂತ ಖೂಬಾ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 5 ಜುಲೈ 2019, 16:28 IST
Last Updated 5 ಜುಲೈ 2019, 16:28 IST
ಭಗವಂತ ಖೂಬಾ
ಭಗವಂತ ಖೂಬಾ   

ಬೀದರ್: ಕೇಂದ್ರ ಬಜೆಟ್ ಅಭಿವೃದ್ಧಿಯ ದೂರದೃಷ್ಟಿ ಹೊಂದಿರುವ ಬಜೆಟ್ ಆಗಿದೆ. ಬಜೆಟ್‌ನಲ್ಲಿ ಆರೋಗ್ಯ, ಮಹಿಳಾ ಸಬಲೀಕರಣ ಮತ್ತಿತರ ಕ್ಷೇತ್ರಗಳಿಗೆ ವಿಶೇಷ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದು ಸಂಸದ ಭಗವಂತ ಖೂಬಾ ಹೇಳಿದ್ದಾರೆ.

ಮಹಿಳಾ ಸ್ವಸಹಾಯ ಸಂಘ, ಜನ ಧನ ಖಾತೆದಾರರಿಗೆ ವಿಶೇಷ ಧನಸಹಾಯ ಪ್ರಕಟಿಸಲಾಗಿದೆ. ರೈತರ ಆದಾಯ ದುಪ್ಪಟ್ಟುಗೊಳಿಸುವ ದಿಸೆಯಲ್ಲಿ ಮೊದಲ ಹೆಜ್ಜೆಯಾಗಿ ಮುಂಗಾರು ಹಂಗಾಮಿನ ಕೃಷಿ ಉತ್ಪನ್ನಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ ಮಾಡಲಾಗಿದೆ ಎಂದು ತಿಳಿಸಿದ್ದಾರೆ. 60 ವರ್ಷ ಮೇಲ್ಪಟ್ಟ ಕಾರ್ಮಿಕರು, ಚಿಲ್ಲರೆ ಅಂಗಡಿ ವ್ಯಾಪಾರಿಗಳಿಗೆ ಮಾನ್ ಸಮ್ಮಾನ್, ಕರ್ಮಯೋಗಿ ಯೋಜನೆಯಡಿ ₹ 3,000 ಮಾಸಾಶನ ಘೋಷಿಸಿರುವುದು ಬಡತನ ನಿರ್ಮೂಲನೆಯ ಮಹತ್ವದ ಹೆಜ್ಜೆ. ಗ್ರಾಮ, ನಗರಗಳ ಅಭಿವೃದ್ಧಿಗೆ ಸಮಾನ ಪ್ರಾತಿನಿಧ್ಯ ಕಲ್ಪಿಸಲಾಗಿದೆ ಎಂದು ಹೇಳಿದ್ದಾರೆ.

2024 ರ ವೇಳೆಗೆ ಪ್ರತಿ ಗ್ರಾಮಕ್ಕೂ ರಸ್ತೆ, ಶುದ್ಧ ಕುಡಿಯುವ ನೀರು, ಮನೆಗೊಂದು ಶೌಚಾಲಯ ಒದಗಿಸುವ ಗುರಿ ಹೊಂದಲಾಗಿದೆ ಎಂದು ಸ್ಪಷ್ಟಿಸಲಾಗಿದೆ. ಗೃಹ ನಿರ್ಮಾಣ ಕ್ಷೇತ್ರಕ್ಕೆ ಒತ್ತು ಕೊಡಲಾಗಿದೆ. ಹೊಸ ಉದ್ಯೋಗ ಸೃಷ್ಟಿಗೆ ವಿಶೇಷ ಸಹಾಯಧನ ಹೆಚ್ಚಿಸಲಾಗಿದೆ. ವಿದ್ಯುತ್ ಚಾಲಿತ ವಾಹನಗಳ ಸಬ್ಸಿಡಿ ಹೆಚ್ಚಿಸಿ ಪರಿಸರ ರಕ್ಷಣೆಗೆ ಆದ್ಯತೆ ಕೊಡಲಾಗಿದೆ. ಬಜೆಟ್ ಕೃಷಿ ಕಾರ್ಮಿಕರು, ನಿರುದ್ಯೋಗಿಗಳು, ಮಹಿಳೆಯರಿಗೆ ಸಹಕಾರಿಯಾಗಿದೆ ಎಂದು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.