ಹುಮನಾಬಾದ್: ಈಚೆಗೆ ನಡೆದ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಚುನಾವಣೆಯಲ್ಲಿ 31 ಜನ ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಮಾರುತಿ ಪೂಜಾರಿ ತಿಳಿಸಿದರು.
34 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಒಟ್ಟು 36 ನಾಮಪತ್ರಗಳು ಸಲ್ಲಿಕೆಯಾಗಿದ್ದವು. ಅದರಲ್ಲಿ 5 ನಾಮಪತ್ರಗಳು ತಿರಸ್ಕೃತಗೊಂಡಿವೆ. ಇನ್ನುಳಿದ 31 ಜನರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ನಾಗಶೆಟ್ಟಿ ಡುಮಣಿ, ಪಿಡಿಒ ಶಿವರಾಜ ಧುಮ್ಮನಸೂರ್, ನಾಗಾರ್ಜುನ ರೆಡ್ಡಿ, ಶಿವರಾಜ್ ಗಡವಂತಿ, ಮಾಣಿಕ್ ನಾಗ ನಾಯಕ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.