ಕಮಲನಗರ: ‘ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು’ ಎಂದು ತಾಲ್ಲೂಕು ಪಂಚಾಯಿತಿ ಆಡಳಿತಾಧಿಕಾರಿಯೂ ಆಗಿರುವ ಕೃಷಿ ಇಲಾಖೆ ಜಂಟಿ ನಿರ್ದೇಶಕಿ ದೇವಿಕಾ ಸೂಚಿಸಿದರು.
ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
‘ನೀರಿನ ಟ್ಯಾಂಕ್‌ಗಳನ್ನು ಸ್ವಚ್ಛಗೊಳಿಸಿ ಗ್ರಾಮೀಣ ಭಾಗದ ಜನರಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸಬೇಕು. ಗ್ರಾಮಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಆಸ್ತಿ ಸೃಜನೆ ಮಾಡುವಂಥ ಕಾಮಗಾರಿಗಳ ಕುರಿತು ಜನರಿಗೆ ಮಾಹಿತಿ ನೀಡಬೇಕು. ದೀರ್ಘ ಬಾಳಿಕೆ ಬರುವಂಥ ಕಾಮಗಾರಿಗಳನ್ನು ಕೈಗೊಳ್ಳಬೇಕು. ನರೇಗಾ ಯೋಜನೆಯಡಿ ಕೃಷಿಗೆ ಸಂಬಂಧಪಟ್ಟ ಕಾಮಗಾರಿಗಳನ್ನು ಕೈಗೊಳ್ಳಬೇಕು’ ಎಂದು ತಿಳಿಸಿದರು.
ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಹಣಮಂತರಾಯ ಕೌಟಗೆ ಮಾತನಾಡಿ,‘ಬಡವರಿಗೆ ಅನುಕೂಲವಾಗುವ ಕಾಮಗಾರಿಗಳ ಬಗ್ಗೆ ಅರಿತುಕೊಂಡು ಅಂಥ ಕಾಮಗಾರಿಗಳಿಗೆ ಮೊದಲು ಆದ್ಯತೆ ಕೊಡಬೇಕು. ತುಂಬಾ ಅವಶ್ಯಕವಾಗಿರುವ ಕಾಮಗಾರಿಗಳ ಪಟ್ಟಿಯನ್ನು ಸಲ್ಲಿಸಬೇಕು. ಕೆಲವು ಗ್ರಾಮ ಪಂಚಾಯಿತಿಗಳಲ್ಲಿ ಜೆಜೆಎಂ ಕಾಮಗಾರಿ ಪೂರ್ಣಗೊಂಡಿಲ್ಲ. ಅದನ್ನು ಪೂರ್ಣಗೊಳಿಸ ಬೇಕು’ ಎಂದು ಸೂಚಿಸಿದರು.
ಎಇಇ ಆನಂದ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕಿರಿಯ ಎಂಜಿನಿಯರ್ ಸೋಮನಾಥ, ಸಿಡಿಪಿಒ ಇಲಾಖೆ ಅಧಿಕಾರಿ ಸತೀಶ, ಎಪಿಎಂಸಿ ಸಿಬ್ಬಂದಿ ನಾಗಪ್ಪ ಯಾದವ, ಪಶು ವೈದ್ಯಾಧಿಕಾರಿ ಡಾ.ಸುರೇಶ.ಎಂ, ರೇಷ್ಮೆ ಇಲಾಖೆ ಅಧಿಕಾರಿ ಸಾಯಿನಾಥ, ಸಹಾಯಕ ತೋಟಗಾರಿಕೆ ಅಧಿಕಾರಿ ಅಣ್ಣೆಪ್ಪಾ ಪಾಟೀಲ, ಕೃಷಿ ಅಧಿಕಾರಿ ಆನಂದ ಸೇರಿದಂತೆ ತಾ.ಪಂ. ಸಿಬ್ಬಂದಿ ಪೀಟರ್, ವಿದ್ಯಾಸಾಗರ, ಸಪ್ನಾ, ಕವಿತಾ ಸೇರಿದಂತೆ ಇತರರು ಪಾಲ್ಗೊಂಡಿದ್ದರು.
ಗ್ರಾಮಗಳಲ್ಲಿ ಸ್ವಚ್ಛತೆ ಕಾಪಾಡಿ ಅವಶ್ಯಕ ಕಾಮಗಾರಿ ಪಟ್ಟಿ ಸಲ್ಲಿಸಿ ಜೆಜೆಎಂ ಕಾಮಗಾರಿ ಪೂರ್ಣಗೊಳಿಸಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.