ADVERTISEMENT

ಗ್ರಾ.ಪಂ ಸದಸ್ಯ ಸ್ಥಾನ ಹರಾಜು ಮಾಡಿದರೆ ಕ್ರಮ

ಗ್ರಾಮ ಸಂಪರ್ಕ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ರಾಮಚಂದ್ರನ್ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 14 ಡಿಸೆಂಬರ್ 2020, 4:53 IST
Last Updated 14 ಡಿಸೆಂಬರ್ 2020, 4:53 IST
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗ್ಯಾನೇಂದ್ರಕುಮಾರ ಗಂಗ್ವಾರ್ ಬೀದರ್‌ನಲ್ಲಿ ತಮಟೆ ಬಾರಿಸಿ ವಾರ್ತಾ ಇಲಾಖೆಯ ಗ್ರಾಮ ಸಂಪರ್ಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ಇದ್ದರು
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗ್ಯಾನೇಂದ್ರಕುಮಾರ ಗಂಗ್ವಾರ್ ಬೀದರ್‌ನಲ್ಲಿ ತಮಟೆ ಬಾರಿಸಿ ವಾರ್ತಾ ಇಲಾಖೆಯ ಗ್ರಾಮ ಸಂಪರ್ಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ಇದ್ದರು   

ಬೀದರ್: ಜಿಲ್ಲೆಯಲ್ಲಿ ಹರಾಜು ಮೂಲಕ ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನಕ್ಕೆ ಅವಿರೋಧ ಆಯ್ಕೆ ಮಾಡುವುದು ಕಂಡು ಬಂದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಎಚ್ಚರಿಸಿದ್ದಾರೆ.

ಮತದಾನ ಹಾಗೂ ಕೊರೊನಾ ಜಾಗೃತಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಔರಾದ್ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಹಮ್ಮಿಕೊಂಡಿದ್ದ ಗ್ರಾಮ ಸಂಪರ್ಕ ಕಾರ್ಯಕ್ರಮಕ್ಕೆ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು.

ಯಾವುದೇ ಅಕ್ರಮಗಳಿಗೆ ಆಸ್ಪದ ಇಲ್ಲದಂತೆ ಗ್ರಾಮ ಪಂಚಾಯಿತಿ ಚುನಾವಣೆಯನ್ನು ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.

ADVERTISEMENT

ಗ್ರಾಮೀಣ ಪ್ರದೇಶದಲ್ಲಿ ಮತದಾನ ಮಹತ್ವ ಕುರಿತು ಇನ್ನಷ್ಟು ಜಾಗೃತಿ ಮೂಡಿಸುವ ಕೆಲಸ ಆಗಬೇಕು. ಮತದಾನಕ್ಕೆ ಅರ್ಹತೆ ಹೊಂದಿರುವವರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಬೇಕು. ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಹೇಳಿದರು.

ಕೊರೊನಾ ಸೋಂಕಿಗೆ ಲಸಿಕೆ ಬರುವವರೆಗೆ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಬೇಕು. ಮನೆಯಿಂದ ಹೊರಗೆ ಹೋಗುವಾಗ ತಪ್ಪದೆ ಮಾಸ್ಕ್ ಧರಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಸುರಕ್ಷಿತ ಅಂತರ ಕಾಯ್ದುಕೊಳ್ಳಬೇಕು. ಸೋಂಕಿನ ಯಾವುದೇ ರೀತಿಯ ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣ ಹತ್ತಿರದ ಆಸ್ಪತ್ರೆಗೆ ತೆರಳಿ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಸಲಹೆ ಮಾಡಿದರು.

ನಂದೀಶ್ವರ ನಾಟ್ಯ ಸಂಘದ ದೇವಿದಾಸ ಚಿಮಕೋಡ, ಮಹಿಳಾ ಚೈತನ್ಯ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ವಿಶಾಲ ದೊಡ್ಡಮನಿ ನೇತೃತ್ವದ ತಂಡಗಳ ಸದಸ್ಯರು ಜಾನಪದ ಸಂಗೀತ ಹಾಗೂ ಬೀದಿನಾಟಕ ಪ್ರದರ್ಶಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗ್ಯಾನೇಂದ್ರಕುಮಾರ ಗಂಗ್ವಾರ್, ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ, ವಾರ್ತಾ ಇಲಾಖೆಯ ವಿಜಯಕೃಷ್ಣ ಜಿ. ಸೋಲಪೂರ, ಬಿಂದುಸಾರ
ಎಸ್.ಧನ್ನೂರ, ನರೇಶಕುಮಾರ, ಓಂಕಾರ, ಸಕ್ಕುಬಾಯಿ, ಜಯಲಕ್ಷ್ಮಿ, ಸತ್ಯಜೀತ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.