ADVERTISEMENT

ಪಶು ವೈದ್ಯಕೀಯ ವಿಶ್ವವಿದ್ಯಾಲಯಕ್ಕೆ ಅನುದಾನ: ರಾಜ್ಯಪಾಲರಿಗೆ ಶಾಸಕ ಶೈಲೇಂದ್ರ ಮನವಿ

​ಪ್ರಜಾವಾಣಿ ವಾರ್ತೆ
Published 23 ಆಗಸ್ಟ್ 2024, 14:25 IST
Last Updated 23 ಆಗಸ್ಟ್ 2024, 14:25 IST
ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಅವರು ಬೆಂಗಳೂರಿನಲ್ಲಿ ರಾಜ್ಯಪಾಲ ಥಾವರ ಚಂದ್ ಗೆಹಲೋತ್ ಅವರಿಗೆ ಮನವಿ ಸಲ್ಲಿಸಿದರು
ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಅವರು ಬೆಂಗಳೂರಿನಲ್ಲಿ ರಾಜ್ಯಪಾಲ ಥಾವರ ಚಂದ್ ಗೆಹಲೋತ್ ಅವರಿಗೆ ಮನವಿ ಸಲ್ಲಿಸಿದರು   

ಜನವಾಡ: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ರಾಜ್ಯಪಾಲರ ವಿವೇಚನಾ ಕೋಟಾದಡಿ ಬೀದರ್ ತಾಲ್ಲೂಕಿನ ಕಮಠಾಣ ಸಮೀಪದ ಕರ್ನಾಟಕ ಪಶು ವೈದ್ಯಕೀಯ ವಿಶ್ವವಿದ್ಯಾಲಯಕ್ಕೆ ಅನುದಾನ ನೀಡಬೇಕು ಎಂದು ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಮನವಿ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಶುಕ್ರವಾರ ರಾಜ್ಯಪಾಲ ಥಾವರ ಚಂದ್ ಗೆಹಲೋತ್ ಅವರನ್ನು ಭೇಟಿ ಮಾಡಿ ಈ ಕುರಿತು ಮನವಿ ಪತ್ರ ಸಲ್ಲಿಸಿದರು.

ಆಣದೂರ ಹೊರವಲಯದ ಕರ್ನಾಟಕ ರಾಜ್ಯ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರದ ಕಟ್ಟಡ ನಿರ್ಮಾಣ ಹಾಗೂ ಬೀದರ್ ವಿಶ್ವವಿದ್ಯಾಲಯಕ್ಕೂ ಅನುದಾನ ಒದಗಿಸಬೇಕು ಎಂದು ಬೇಡಿಕೆ ಮಂಡಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.