ADVERTISEMENT

‘ಪರಿಶಿಷ್ಟ ಜಾತಿಯವರಿಗೆ ಸ್ಮಶಾನ ಭೂಮಿ ನೀಡಿ’

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2022, 12:27 IST
Last Updated 17 ಸೆಪ್ಟೆಂಬರ್ 2022, 12:27 IST
ಔರಾದ್‌ನಲ್ಲಿ ದಲಿತ ಸಂಘರ್ಷ ಸಮಿತಿ ಮುಖಂಡರು ತಹಶೀಲ್ದಾರ್ ಅರುಣಕುಮಾರ ಕುಲಕರ್ಣಿ ಅವರಿಗೆ ಮನವಿ ಸಲ್ಲಿಸಿದರು
ಔರಾದ್‌ನಲ್ಲಿ ದಲಿತ ಸಂಘರ್ಷ ಸಮಿತಿ ಮುಖಂಡರು ತಹಶೀಲ್ದಾರ್ ಅರುಣಕುಮಾರ ಕುಲಕರ್ಣಿ ಅವರಿಗೆ ಮನವಿ ಸಲ್ಲಿಸಿದರು   

ಔರಾದ್: ‘ತಾಲ್ಲೂಕಿನಲ್ಲಿ ಪರಿಶಿಷ್ಟ ಜಾತಿಯವರಿಗೆ ಸ್ಮಶಾನ ಭೂಮಿ ಮಂಜೂರು ಮಾಡಬೇಕು’ ಎಂದು ದಲಿತ ಸಂಘರ್ಷ ಸಮಿತಿ ಆಗ್ರಹಿಸಿದೆ.

ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ಸತೀಶ ವಗ್ಗೆ, ತುಕಾರಾಮ ಹಸನ್ಮುಖಿ, ಗಣಪತಿ ವಾಸುದೇವ, ಸುಭಾಷ ಲಾಧಾ ಅವರು ಶುಕ್ರವಾರ ತಹಶೀಲ್ದಾರ್ ಅರುಣಕುಮಾರ ಕುಲಕರ್ಣಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

ತಾಲ್ಲೂಕಿನಾದ್ಯಂತ ಪರಿಶಿಷ್ಟ ಜಾತಿಯವರು ಶವ ಸಂಸ್ಕಾರಕ್ಕಾಗಿ ತೊಂದರೆ ಅನುಭವಿಸುತ್ತಿದ್ದಾರೆ. ಕೆಲ ಗ್ರಾಮಗಳಲ್ಲಿ ಜಾಗ ಸಿಗದೆ ಎರಡೆರಡು ದಿನ ಶವ ಮನೆಯಲ್ಲೇ ಇಟ್ಟುಕೊಳ್ಳುವ ಪ್ರಸಂಗ ಬಂದಿದೆ. ಈ ವಿಷಯ ಅಧಿಕಾರಿಗಳ ಗಮನಕ್ಕೂ ಬಂದಿದೆ. ಹೀಗಾಗಿ ಮುಂದೆ ಇಂಥ ಸಮಸ್ಯೆ ಆಗದಂತೆ ತಾಲ್ಲೂಕಿನ ಎಲ್ಲ ಊರುಗಳಲ್ಲಿ ಸ್ಮಶಾನ ಭೂಮಿ ವ್ಯವಸ್ಥೆ ಮಾಡಬೇಕು. ಆದಷ್ಟು ಬೇಗ ಈ ಕೆಲಸ ಆಗಬೇಕು. ಇಲ್ಲವಾದಲ್ಲಿ ದಲಿತ ಸಂಘರ್ಷ ಸಮಿತಿಯಿಂದ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.