ADVERTISEMENT

ಎಂಜಿನಿಯರ್‌ಗಳ ಭವನಕ್ಕೆ ಅನುದಾನ: ಭರವಸೆ

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2022, 15:00 IST
Last Updated 19 ಸೆಪ್ಟೆಂಬರ್ 2022, 15:00 IST
ಬೀದರ್‌ನಲ್ಲಿ ಆಯೋಜಿಸಿದ್ದ ಎಂಜಿನಿಯರ್‌ಗಳ ದಿನಾಚರಣೆ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸಭಾಪತಿ ರಘುನಾಥರಾವ್ ಮಲ್ಕಾಪುರೆ ಮಾತನಾಡಿದರು
ಬೀದರ್‌ನಲ್ಲಿ ಆಯೋಜಿಸಿದ್ದ ಎಂಜಿನಿಯರ್‌ಗಳ ದಿನಾಚರಣೆ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸಭಾಪತಿ ರಘುನಾಥರಾವ್ ಮಲ್ಕಾಪುರೆ ಮಾತನಾಡಿದರು   

ಬೀದರ್: ನಗರದಲ್ಲಿ ಎಂಜಿನಿಯರ್‌ಗಳ ಭವನ ನಿರ್ಮಾಣಕ್ಕೆ ತಮ್ಮ ನಿಧಿಯಿಂದ ₹ 10 ಲಕ್ಷ ಅನುದಾನ ಒದಗಿಸಲಾಗುವುದು ಎಂದು ವಿಧಾನ ಪರಿಷತ್ ಸಭಾಪತಿ ರಘುನಾಥರಾವ್ ಮಲ್ಕಾಪುರೆ ಹೇಳಿದರು.

ನಗರದ ಪುಷ್ಪಾಂಜಲಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಎಂಜಿನಿಯರ್‌ಗಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಭವನಕ್ಕೆ ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದಿಂದ ನಿವೇಶನ ಕೊಡಿಸಲಾಗುವುದು ಎಂದು ಭರವಸೆ ನೀಡಿದರು.

ADVERTISEMENT

ಎಸಿಸಿಇ(ಐ) ಉಪಾಧ್ಯಕ್ಷ ರಾಜಕುಮಾರ ಕಾಚರಲಾ, ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಎಂಜಿನಿಯರ್ಸ್ ಇಂಡಿಯಾದ ಬೀದರ್ ಘಟಕದ ಅಧ್ಯಕ್ಷ ಅನಿಲಕುಮಾರ ಔರಾದೆ, ಕಾರ್ಯದರ್ಶಿ ಶಿವಶಂಕರ ಕಾಮಶೆಟ್ಟಿ ಮಾತನಾಡಿದರು.

ಹಿರಿಯ ಎಂಜಿನಿಯರ್‌ಗಳಾದ ಹಾವಶೆಟ್ಟಿ ಪಾಟೀಲ, ವೀರಶೆಟ್ಟಿ ಮಣಗೆ, ರಾಜಶೇಖರ ಕರ್ಪೂರ, ರವಿ ಮೂಲಗೆ, ಗೋರಕನಾಥ ಚನಶೆಟ್ಟಿ, ಚಂದ್ರಕಾಂತ ಮಿರ್ಚೆ, ರಾಚಪ್ಪ ಪಾಟೀಲ, ಸಿ.ಎಸ್. ಪಾಟೀಲ, ರಾಜಶೇಖರ ಮಠ ಇದ್ದರು. ಶ್ರೇಯಾ ಮಹೇಂದ್ರಕರ್ ನಿರೂಪಿಸಿದರು. ಶಿವಕುಮಾರ ಪಾಟೀಲ ವಂದಿಸಿದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.