ADVERTISEMENT

ಪರಿಸರ ಸಂರಕ್ಷಣೆಗೆ ಹಸಿರು ಪಡೆ ಯೋಜನೆ ಸಹಕಾರಿ: ಪರಿಸರವಾದಿ ಶೈಲೇಂದ್ರ

​ಪ್ರಜಾವಾಣಿ ವಾರ್ತೆ
Published 16 ಡಿಸೆಂಬರ್ 2019, 10:55 IST
Last Updated 16 ಡಿಸೆಂಬರ್ 2019, 10:55 IST
ಹುಮನಾಬಾದ್‍ನ ದುಬಲಗುಂಡಿ ಗ್ರಾಮದ ಉರ್ದು ಸರ್ಕಾರಿ ಹಿರಿಯ ಪ್ರಾಧಮಿಕ ಶಾಲೆಯಲ್ಲಿ ಶನಿವಾರ ನಡೆದ ಪರಿಸರ ಜಾಗೃತಿ ಕಾರ್ಯಕ್ರಮಕ್ಕೆ ಪರಿಸರವಾದಿ ಶೈಲೆಂದ್ರ ಕಾವಡಿ ಸಸಿಗೆ ನೀರು ಹಾಕುವ ಮೂಲಕ ಉದ್ಘಾಟಿಸಿದರು
ಹುಮನಾಬಾದ್‍ನ ದುಬಲಗುಂಡಿ ಗ್ರಾಮದ ಉರ್ದು ಸರ್ಕಾರಿ ಹಿರಿಯ ಪ್ರಾಧಮಿಕ ಶಾಲೆಯಲ್ಲಿ ಶನಿವಾರ ನಡೆದ ಪರಿಸರ ಜಾಗೃತಿ ಕಾರ್ಯಕ್ರಮಕ್ಕೆ ಪರಿಸರವಾದಿ ಶೈಲೆಂದ್ರ ಕಾವಡಿ ಸಸಿಗೆ ನೀರು ಹಾಕುವ ಮೂಲಕ ಉದ್ಘಾಟಿಸಿದರು   

ಹುಮನಾಬಾದ್: ಹಸಿರು ಪಡೆ ಯೋಜನೆ ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆಯ ಅರಿವು ಮೂಡಿಸುವಲ್ಲಿ ಸಹಕಾರಿಯಾಗಿದೆ ಎಂದು ಪರಿಸರವಾದಿ ಶೈಲೇಂದ್ರ ಕಾವಡಿ ಹೇಳಿದರು.

ತಾಲ್ಲೂಕಿನ ದುಬಲಗುಂಡಿ ಉರ್ದು ಸರ್ಕಾರಿ ಹಿರಿಯ ಪ್ರಾಧಮಿಕ ಶಾಲೆಯಲ್ಲಿ ಅಬ್ದುಲ್ ಕಲಾಂ ಇಕೋಕ್ಲಬ್ ವತಿಯಿಂದ ಶನಿವಾರ ಆಯೋಜಿಸಿದ್ದ ಪರಿಸರ ಸಂರಕ್ಷಣೆ ಜನಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಹಸಿರು ಪಡೆ ಯೋಜನೆಯ ಮೂಲಕ ಮಕ್ಕಳಲ್ಲಿ ನೀರು, ಔಷಧಿ ಸಸ್ಯಗಳ, ಪ್ರಾಣಿ ಪಕ್ಷಿಗಳ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ADVERTISEMENT

ಅರಣ್ಯ ನಾಶದಿಂದ ಭೂ ತಾಪಮಾನ ಹೆಚ್ಚಳವಾಗಿ ಜಲಮೂಲಗಳು ಬತ್ತಿ ಹೋಗುತ್ತಿವೆ. ಪ್ರತಿಯೂಬ್ಬರೂ ಜಲ ಮೂಲಗಳ ಸಂರಕ್ಷಣೆ ಮತ್ತು ಭೂ ತಾಪಮಾನ ಕಡಿಮೆ ಮಾಡಲು ಮರ ಗಿಡ ಬೆಳೆಸಿ ಪರಿಸರ ಸಂರಕ್ಷಣೆಗಾಗಿ ಶ್ರಮಿಸಬೇಕು ಎಂದು ಸಲಹೆನೀಡಿದರು.

ಮುಖ್ಯ ಶಿಕ್ಷಕ ಸಾಬಿಯಾ ಪವಿನ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಹಶಿಕ್ಷಕರಾದ ಫಕ್ರೋನಿಸಾ ಬೇಗಂ, ಮಹಮ್ಮದ್ ಇಂತಿಯಾಜ್, ಮಹಮ್ಮದ್ ರಿಜ್ವಾನ್, ಮಹಮ್ಮದ್ ಅರಿಫ್ ಅಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.