
ಬೀದರ್: ‘ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಅಧಿಕಾರಿಗಳಿಗೆ ಲಿಖಿತ ರೂಪದಲ್ಲಿ ದೂರುಗಳು ಬಂದರೆ ಅವುಗಳಿಗೆ ಅಧಿಕಾರಿಗಳು ಸ್ಪಂದಿಸಬೇಕು. ಇಲ್ಲವಾದಲ್ಲಿ ಕ್ರಮ ಜರುಗಿಸಲಗುವುದು’ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಮೃತರಾವ್ ಚಿಮಕೋಡೆ ತಿಳಿಸಿದರು.
ಸಲ್ಲಿಸಿ, ಒಂದು ವೇಳೆ ಅವರು ಸಮಸ್ಯೆಗೆ ಸ್ಪಂದಿಸದಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಪ್ರಾಮಾಣಿಕವಾಗಿ ಜನರಿಗೆ ಪಂಚ ಗ್ಯಾರಂಟಿಗಳು ತಲುಪಿಸುವ ಕೆಲಸ ಹಾಗೂ ಇವುಗಳ ಬಗ್ಗೆ ಜನರಿಗೆ ಅರಿವು ಮೂಡಿಸುವ ಕಾರ್ಯ ಸಂಬAಧಪಟ್ಟ ಅಧಿಕಾರಿಗಳು ಮಾಡಬೇಕು ಎಂದು ತಿಳಿಸಿದರು.
ನಗರದ ಜಿಲ್ಲಾ ಪಂಚಾಯಿತಿಯಲ್ಲಿ ಶುಕ್ರವಾರ ನಡೆದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕೆಲವು ಕಡೆ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಬಸ್ ನಿಲ್ಲಿಸುತ್ತಿಲ್ಲ ಎಂಬ ಆರೋಪಗಳು ಕೇಳಿ ಬಂದಿವೆ. ಸಮಸ್ಯೆಯನ್ನು ತಕ್ಷಣವೇ ಪರಿಹರಿಸಬೇಕು. ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯ ಒಟ್ಟು ಕುಟುಂಬದ ಮಹಿಳಾ ಮುಖ್ಯಸ್ಥೆಯ ಹೆಸರಿನಲ್ಲಿರುವ ಪಡಿತರ ಚೀಟಿಗಳು 3,81,970 ಇದ್ದು, ಗೃಹಲಕ್ಷ್ಮೀ ಯೋಜನೆಯ ಅಡಿಯಲ್ಲಿ ಆಗಸ್ಟ್ ಅಂತ್ಯಕ್ಕೆ 3,55,304 ಫಲನುಭವಿಗಳು ನೋಂದಣಿ ಮಾಡಿಸಿಕೊಂಡಿದ್ದಾರೆ. ಮಾಸಿಕ ₹2ದಂತೆ ₹1,382.49 ಕೋಟಿ ಹಣ ಡಿಬಿಟಿ ಮೂಲಕ ವರ್ಗಾಯಿಸಲಾಗುತ್ತಿದೆ. ಐಟಿ, ಜಿ.ಎಸ್.ಟಿ. ಸಮಸ್ಯೆ ನಿವಾರಣೆ ಆದವರು ಮತ್ತೆ ಅರ್ಜಿ ಸಲ್ಲಿಸಲು ತಿಳಿಸಬೇಕು ಎಂದರು.
ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ 13,13,305 ಫಲಾನುಭವಿಗಳಿದ್ದು, ₹333.28 ಕೋಟಿ ಅನುದಾನ ಬಳಕೆಯಾಗಿದೆ. ಜುಲೈ 2023 ರಿಂದ ಜನವರಿ 2025ರ ವರೆಗೆ 5 ಕೆಜಿ ಅಕ್ಕಿ ಮತ್ತು ಉಳಿದ 5 ಕೆಜಿ ಅಕ್ಕಿಯ ಮೊತ್ತವನ್ನು ಡಿಬಿಟಿ ಮೂಲಕ ಹಣ ವರ್ಗಾಯಿಸಲಾಗಿದೆ. ಆದರೆ, ಫೆಬ್ರುವರಿ 2025 ರಿಂದ 10 ಕೆಜಿ ಅಕ್ಕಿ ನೀಡಲಾಗುತ್ತಿದೆ. ಜುಲೈನಿಂದ ಅಕ್ಕಿ ಜೊತೆಗೆ ಜೋಳ ಸೇರಿಸಿ ಒಟ್ಟು 10 ಕೆಜಿ ಆಹಾರಧಾನ್ಯ ನೀಡಲಾಗುತ್ತಿದೆ. ಪಡಿತರ ಅಕ್ಕಿಯು ಕಾಳಸಂತೆಯಲ್ಲಿ ಮಾರಾಟ ಆಗದಂತೆ ನೋಡಿಕೊಳ್ಳಬೇಕು. ಕೆಲವು ಹಳ್ಳಿ ಮತ್ತು ತಾಂಡಾಗಳಲ್ಲಿ ನ್ಯಾಯ ಬೆಲೆ ಅಂಗಡಿ ಇಲ್ಲ. ಬೇರೆ ಗ್ರಾಮಕ್ಕೆ ಹೋಗಿ ತರಬೇಕಾಗಿದೆ. ಜನರಿಗೆ ತೊಂದರೆಯಾಗದಂತೆ ರೇಷನ್ ಉಪ ಕೇಂದ್ರ ಸ್ಥಾಪಿಸಿ, ರೇಷನ್ ನೀಡಬೇಕು. ಬಯೋ ಮೆಟ್ರಿಕ್ ತೆಗೆದುಕೊಂಡ ಕೂಡಲೇ ರೇಷನ್ ನೀಡಬೇಕು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಯುವನಿಧಿ ಯೋಜನೆಯ ಅಡಿಯಲ್ಲಿ ಜಿಲ್ಲೆಯಲ್ಲಿ ಒಟ್ಟು 12,196 ಜನ ನೋಂದಣಿ ಮಾಡಿಸಿದ್ದು, ಇದರಲ್ಲಿ 11,900 ಪದವಿ ಅಭ್ಯರ್ಥಿಗಳು, 296 ಡಿಪ್ಲೋಮಾ ಅಭ್ಯರ್ಥಿಗಳು ಫಲಾನುಭವಿಗಳಿಗೆ ₹26.90 ಕೋಟಿ ಅನುದಾನ ಬಳಕೆಯಾಗಿದೆ. ಯುವನಿಧಿ ಯೋಜನೆ ಬಗ್ಗೆ ಅಧಿಕಾರಿಗಳು ತಾಲ್ಲೂಕು ಮಟ್ಟದಲ್ಲೂ ಹೆಚ್ಚಿನ ಪ್ರಚಾರ ಕೈಗೊಳ್ಳಬೇಕು. ಯುವನಿಧಿ ಪ್ಲಸ್ ಕಾರ್ಯಕ್ರಮ ಅಡಿ ತರಬೇತಿ ನೀಡಲು ಹೆಚ್ಚಿನ ಜಾಗೃತಿ ಮೂಡಿಸಬೇಕು. ಪದವಿ ಮತ್ತು ಡಿಪ್ಲೋಮಾ ಕೋರ್ಸ್ ಮುಗಿಸಿದವರ ಪಟ್ಟಿ ಪಡೆದು ಯುವನಿಧಿ ಯೋಜನೆಯಡಿ ನೋಂದಣಿಯಾಗುವಂತೆ ನೋಡಿಕೊಳ್ಳಬೇಕೆಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ್ ಬದೋಲೆ, ಮುಖ್ಯ ಯೋಜನಾಧಿಕಾರಿ ಕಿಶೋರಕುಮಾರ ದುಬೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶ್ರೀಧರ್ ಎಮ್.ಎಚ್., ಕೆಕೆಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಆರ್.ಬಿ. ಜಾಧವ, ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ವಿ. ಪ್ರಭಾಕರ ಸೇರಿದಂತೆ ಇತರರಿದ್ದರು.
ನಿತ್ಯ 1.14 ಲಕ್ಷ ಮಹಿಳೆಯರ ಸಂಚಾರ
ಜಿಲ್ಲೆಯಲ್ಲಿ ಗೃಹ ಜ್ಯೋತಿ ಯೋಜನೆಯ ಅಡಿಯಲ್ಲಿ ಒಟ್ಟು 353011 ಫಲಾನುಭವಿಗಳಿದ್ದು ₹410.52 ಕೋಟಿ ಬಳಕೆಯಾಗಿದೆ. ಶಕ್ತಿ ಯೋಜನೆಯ ಅಡಿಯಲ್ಲಿ ಜಿಲ್ಲೆಯಲ್ಲಿ 2023ರ ಜುನ್ 11ರಿಂದ 2025ರ ಅಕ್ಟೋಬರ್ 12ರ ವರೆಗೆ ಮಹಿಳೆಯರು ಮತ್ತು ಬಾಲಕಿಯರು ಸೇರಿದಂತೆ ಒಟ್ಟು 9.74 ಕೋಟಿ ಫಲಾನುಭವಿಗಳು ಸೌಲಭ್ಯ ಪಡೆದಿದ್ದಾರೆ. ವಿಭಾಗದ ವಾಹನದಲ್ಲಿ ಪ್ರತಿ ದಿನ ಸರಾಸರಿ 1.14 ಲಕ್ಷ ಮಹಿಳೆಯರು ಪ್ರಯಾಣಿಸುತ್ತಿದ್ದಾರೆ. ಇದಕ್ಕೆ ₹283.84 ಕೋಟಿ ಸಂದಾಯವಾಗಿದೆ. ಪ್ರತಿ ದಿನ ಪ್ರಯಾಣಿಕರಿಂದ ಸರಾಸರಿ ₹33.24 ಲಕ್ಷ ಸಾರಿಗೆ ಆದಾಯವಾಗುತ್ತಿದೆ. ಕಳೆದ ಸಭೆಯ ಬೇಡಿಕೆಯಂತೆ ಬಸ್ ಸಮಸ್ಯೆ ಇರುವ ಕಡೆಗೆ ಬಸ್ಸಿನ ವ್ಯವಸ್ಥೆ ಮಾಡಲಾಗಿದೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.