ADVERTISEMENT

ಪೊಲೀಸ್ ವಸತಿ ಗೃಹ ನಿರ್ಮಾಣಕ್ಕೆ ಗುದ್ದಲಿ ಪೂಜೆ

​ಪ್ರಜಾವಾಣಿ ವಾರ್ತೆ
Published 31 ಜುಲೈ 2024, 15:46 IST
Last Updated 31 ಜುಲೈ 2024, 15:46 IST
ಹುಮನಾಬಾದ್ ಪಟ್ಟಣದ ಪೊಲೀಸ್ ಠಾಣೆಯ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ ಮಾತನಾಡಿದರು
ಹುಮನಾಬಾದ್ ಪಟ್ಟಣದ ಪೊಲೀಸ್ ಠಾಣೆಯ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ ಮಾತನಾಡಿದರು   

ಹುಮನಾಬಾದ್: ₹ 10 ಕೋಟಿ ಅನುದಾನದಲ್ಲಿ ಪೊಲೀಸ್ ಸಿಬ್ಬಂದಿಗಳ ವಸತಿ ಗೃಹ ನಿರ್ಮಾಣ ಮಾಡಲಾಗುತ್ತಿದೆ ಎಂದು ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ ತಿಳಿಸಿದರು.

ಪಟ್ಟಣದ ಪೊಲೀಸ್ ಠಾಣೆಯ ಹಿಂದುಗಡೆ ನಡೆದ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸರ್ಕಾರದ ಮೇಲೆ ಒತ್ತಡ ಹಾಕಿ ಈ ಅನುದಾನ ತರಲಾಗಿದೆ. ಈ ಅನುದಾನದಲ್ಲಿ ಒಟ್ಟು 36 ಮನೆಗಳು ನಿರ್ಮಾಣ ಆಗಲಿವೆ. ಪೊಲೀಸರಿಗಾಗಿ ಈ ಹಿಂದೆ ಕೆಲವು ಕಟ್ಟಡಗಳು ನಿರ್ಮಾಣ ಮಾಡಲಾಗಿದೆ. ಇದರ ಉದ್ಘಾಟನೆಯನ್ನು ಗೃಹ ಸಚಿವರಿಂದ ಮಾಡಿಸಲಾಗುವುದು. ಈ ಕುರಿತು ಈಗಾಗಲೇ ಸಚಿವರಿಗೆ ತಿಳಿಸಲಾಗಿದೆ. ಆದಷ್ಟು ಬೇಗ ದಿನಾಂಕ ತಿಳಿಸುತ್ತೇನೆ ಎಂದಿದ್ದಾರೆ ಎಂದರು.

ADVERTISEMENT

ವಿಧಾನ ಪರಿಷತ್ ಭೀಮರಾವ್ ಪಾಟೀಲ ಮಾತನಾಡಿ, ಈ ವಸತಿ ಕಟ್ಟಡ ಗುಣಮಟ್ಟದಿಂದ ಕೂಡಿರಬೇಕು. ಗುತ್ತಿಗೆದಾರರು ಯಾವ ರೀತಿ ನಿರ್ಮಾಣ ಮಾಡುತ್ತಿದ್ದಾರೆ ಎಂಬುವುದನ್ನು ಸಹ ಪೊಲೀಸ್ ಮೇಲಾಧಿಕಾರಿಗಳು ಗಮನ ಹರಿಸಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟೆ, ಡಿವೈಎಸ್ಪಿ ಜೆ.ಎಸ್. ನ್ಯಾಮೇಗೌಡರ್, ಪಿಎಸ್ಐಗಳಾದ ಅಯ್ಯಪ್ಪ, ಬಸವಲಿಂಗ, ಬಿಜೆಪಿ ಮುಖಂಡ ಸಂತೋಷ್ ಪಾಟೀಲ, ಸುನೀಲ ಪಾಟೀಲ, ಪ್ರಭಾಕರ್ ನಾಗರಹಳೆ, ಗಿರೀಶ್ ತುಂಬಾ, ಅನೀಲ ಪಸರ್ಗಿ, ರಮೇಶ ಕಲ್ಲೂರ್, ಧನಲಕ್ಷ್ಮೀ, ರವಿ ಹೊಸಳ್ಳಿ, ಗೋಪಾಲಕೃಷ್ಣ, ಪ್ರಕಾಶ್ ತಿಬಶಟ್ಟಿ ಸೇರಿದಂತೆ ಇತರರು ಹಾಜರಿದ್ದರು.

‘ಸುಳ್ಳು ಆರೋಪ; ಕ್ರಮ ಕೈಗೊಳ್ಳಿ’

ಸಂಗಮೇಶ ಚಿದ್ರಿ ಎಂಬುವವರು ಧುಮ್ಮನಸೂರ್ ಗ್ರಾಮದಲ್ಲಿನ ಅರಣ್ಯ ಭೂಮಿ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ಈಚೆಗೆ ತೆರವು ಮಾಡಿದ್ದಾರೆ. ಇದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಆದರೆ ಸಂಗಮೇಶ ಚಿದ್ರಿ ಸೇರಿದಂತೆ ಇತರರು ಸಾಮಾಜಿಕ ಜಾಲತಾಣಗಳಲ್ಲಿ ನನ್ನ ವಿರುದ್ಧ ಇಲ್ಲಸಲ್ಲದ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಈ ಅವರ ವಿರುದ್ಧ ಸೂಕ್ತ ಕಾನೂನಿನ ಕ್ರಮ ಜರುಗಿಸಬೇಕು.‌‌ಇಲ್ಲದಿದ್ದರೆ ಸಮಾಜದಲ್ಲಿ ಅಶಾಂತಿ ಉಂಟು ಮಾಡುತ್ತಾರೆ ಎಂದು ಶಾಸಕ ಡಾ. ಸಿದ್ದಲಿಂಗಪ್ಪ ಪಾಟೀಲ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟೆ ಅವರಿಗೆ ತಿಳಿಸಿದರು. ‘ಜಮೀನಿನಲ್ಲಿ ವಿಷ ತ್ಯಾಜ್ಯ’:  ತಾಲ್ಲೂಕಿನ ಮೋಳಕೇರಾ ಗ್ರಾಮದ ಸರ್ವೇ ನಂ. 93 ಜಮೀನಿನಲ್ಲಿ ‌ವಿಷಕಾರಿ ತ್ಯಾಜ್ಯ ಬಿಟ್ಟಿದ್ದಾರೆ ಎಂದು ಆರೋಪಿಸಿ ರೈತ ಇಸ್ಮಾಯಿಲ್ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟೆ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಸದ್ಯ ಈ ಜಮೀನಲ್ಲಿ ಮಾವಿನ ಗಿಡ‌ ಸೋಯಾ ‌ಕಬ್ಬು ಸೇರಿದಂತೆ ಇತರ ಬೆಳೆಗಳು ಬಳಸಲಾಗಿತ್ತು. ಯಾರೋ ನನ್ನ ಜಮೀನಿನಲ್ಲಿ ‌ವಿಷಕಾರಿ ತ್ಯಾಜ್ಯ ಬಿಟ್ಟಿದ್ದರಿಂದಾಗಿ ಗಿಡಗಳು ಮತ್ತು ಬೆಳೆ ಒಣಗುತ್ತಿವೆ . ಹೀಗಾಗಿ ಇದನ್ನು ಬಿಟ್ಟವರು ಯಾರು ಎಂಬುವುದನ್ನು ಪತ್ತೆ ಹಚ್ಚಿ ಅವರ ವಿರುದ್ಧ ಕ್ರಮ ಜರುಗಿಸಿ. ಹಾನಿಯಾದ ಬೆಳೆಯ ಪರಿಹಾರ ಒದಗಿಸಬೇಕು ಎಂದು ಮನವಿ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.