ADVERTISEMENT

ಅತಿಥಿ ಉಪನ್ಯಾಸಕರ ನೇಮಕಾತಿಗಾಗಿ ಅರ್ಜಿ

​ಪ್ರಜಾವಾಣಿ ವಾರ್ತೆ
Published 6 ಜೂನ್ 2025, 15:47 IST
Last Updated 6 ಜೂನ್ 2025, 15:47 IST

ಬೀದರ್: ‘ಬೀದರ್ ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ವಿಷಯವಾರು ಖಾಲಿ ಇರುವ ಉಪನ್ಯಾಸಕರ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರುಗಳನ್ನು ನೇಮಕ ಮಾಡಿಕೊಳ್ಳಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ’ ಎಂದು ಬೀದರ್‌ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರ್ಹ ಅಭ್ಯರ್ಥಿಗಳು ಹೆಸರು, ಪೂರ್ಣ ವಿಳಾಸ (ದೂರವಾಣಿ/ಮೊಬೈಲ್ ಸಂಖ್ಯೆಯೊಂದಿಗೆ), ಜನ್ಮ ದಿನಾಂಕ, ವಿದ್ಯಾರ್ಹತೆ ಮತ್ತು ವಾಸಸ್ಥಳದ ಬಗ್ಗೆ ಮಾಹಿತಿಯುಳ್ಳ ಅರ್ಜಿಯ ಜೊತೆಗೆ ಅಂಕಪಟ್ಟಿಗಳೊಂದಿಗೆ ಜೂ 13ರರೊಳಗಾಗಿ ಸಂಬಂಧಿಸಿದ ಕಾಲೇಜಿನ ಪ್ರಾಂಶುಪಾಲರಿಗೆ ಸಲ್ಲಿಸಬಹುದಾಗಿದೆ. ಅತಿಥಿ ಉಪನ್ಯಾಸಕರ ಹುದ್ದೆಗೆ ನಿಗದಿಪಡಿಸಿದ ಕನಿಷ್ಠ ವಿದ್ಯಾರ್ಹತೆ ಪರಿಗಣಿಸಿ ಮೆರಿಟ್ ಆಧಾರದ ಮೇಲೆ ನೇಮಕಾತಿ ಮಾಡಲಾಗುವುದು. ನೇಮಕಾತಿಗಳು ತಾತ್ಕಾಲಿಕವಾಗಿರುತ್ತವೆ’ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT