ADVERTISEMENT

ಬೀದರ್‌| ಅತಿಥಿ ಉಪನ್ಯಾಸಕರ ಸೇವೆ ಮುಂದುವರಿಕೆಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 17 ಅಕ್ಟೋಬರ್ 2025, 6:27 IST
Last Updated 17 ಅಕ್ಟೋಬರ್ 2025, 6:27 IST
ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿ ಜಿಲ್ಲಾ ಘಟಕದ ಪದಾಧಿಕಾರಿಗಳು ಬೀದರ್‌ನಲ್ಲಿ ಗುರುವಾರ ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಕರಾಳೆ ಅವರಿಗೆ ಮನವಿ ಪತ್ರ ಸಲ್ಲಿಸಿದರು
ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿ ಜಿಲ್ಲಾ ಘಟಕದ ಪದಾಧಿಕಾರಿಗಳು ಬೀದರ್‌ನಲ್ಲಿ ಗುರುವಾರ ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಕರಾಳೆ ಅವರಿಗೆ ಮನವಿ ಪತ್ರ ಸಲ್ಲಿಸಿದರು   

ಬೀದರ್‌: 2025–26ನೇ ಸಾಲಿನ ಶೈಕ್ಷಣಿಕ ಅವಧಿಯಲ್ಲಿ ಬೇಷರತ್ತಾಗಿ ಅತಿಥಿ ಉಪನ್ಯಾಸಕರನ್ನು ಸೇವೆಯಲ್ಲಿ ಮುಂದುವರೆಸಬೇಕೆಂದು ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿ ಜಿಲ್ಲಾ ಘಟಕ ಆಗ್ರಹಿಸಿದೆ.

ಸಮಿತಿಯ ಪದಾಧಿಕಾರಿಗಳು ನಗರದಲ್ಲಿ ಗುರುವಾರ ಮುಖ್ಯಮಂತ್ರಿ ಅವರ ಹೆಸರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿಗೆ ಸಲ್ಲಿಸಿ ಒತ್ತಾಯಿಸಿದರು.

ಹಲವು ದಶಕಗಳಿಂದ ಸೇವೆ ಸಲ್ಲಿಸುತ್ತಿರುವ ಬಂದಿರುವ ಅತಿಥಿ ಉಪನ್ಯಾಸಕರ ಉದ್ಯೋಗದ ಹಕ್ಕು ಸಂರಕ್ಷಣೆಗೆ ಸಚಿವ ಸಂಪುಟದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಬೇಕು. ಯುಜಿಸಿ 2018ರ ನಿಯಮಗಳನ್ವಯ 2018ರ ಪೂರ್ವದಲ್ಲಿ ಅತಿಥಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸಿದವರಿಗೆ ಅನ್ವಯವಾಗದಂತೆ ಯಥಾಸ್ಥಿತಿಯಲ್ಲಿ ಅವರುಗಳನ್ನು ಸೇವೆಯಲ್ಲಿ ಮುಂದುವರೆಸಬೇಕು. ಬೇಡಿಕೆ ಈಡೇರಿಸಲು ಆಗ್ರಹಿಸಿ ಅ. 18ರಂದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ADVERTISEMENT

ಸಮಿತಿ ಬೀದರ್‌ ಜಿಲ್ಲಾಧ್ಯಕ್ಷ ಚಂದ್ರಕಾಂತ ನಾರಾಯಣಪೂರ, ಶರಣಪ್ಪ ಬಗದುರೆ, ದೇವರಾಜ ಪಾಟೀಲ್, ನಾಮದೇವ, ಶಾಮ‌ಸುಂದರ, ದಶರಥ ಮೇತ್ರಿ, ಶೇವತಾ, ಕೀರ್ತಿ, ಪ್ರಮೀಳಾ, ಗಂಗು ಗಾಯತ್ರಿ, ಮಲ್ಲಿಕಾರ್ಜುನ ಬಿರಾದಾರ, ಬಾಬು ಮಚಕೂರಿ ಇತರರಿದ್ದರು.