ADVERTISEMENT

ನ್ಯಾ.ನಾಗಮೋಹನದಾಸ್‌ಗೆ ಗುರು ಬಸವ ಪುರಸ್ಕಾರ

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2019, 17:02 IST
Last Updated 13 ಫೆಬ್ರುವರಿ 2019, 17:02 IST
ಎಚ್.ಎನ್. ನಾಗಮೋಹನದಾಸ್‌
ಎಚ್.ಎನ್. ನಾಗಮೋಹನದಾಸ್‌   

ಬೀದರ್‌: ಬಸವ ಸೇವ ಪ್ರತಿಷ್ಠಾನ ಹಾಗೂ ಲಿಂಗಾಯತ ಮಹಾಮಠದ ವತಿಯಿಂದ ವಚನ ವಿಜಯೋತ್ಸವದಲ್ಲಿ ನೀಡುವ 2019ನೇ ಸಾಲಿನ ಗುರು ಬಸವ ಪುರಸ್ಕಾರಕ್ಕೆ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನದಾಸ್ ಆಯ್ಕೆಯಾಗಿದ್ದಾರೆ.

ಲಿಂಗಾಯತ ಸ್ವತಂತ್ರ ಧರ್ಮ ಮತ್ತು ಲಿಂಗಾಯತ ಅಲ್ಪಸಂಖ್ಯಾತ ಮಾನ್ಯತೆ ಕುರಿತು ಅವರು ಅಲ್ಪಕಾಲದಲ್ಲಿಯೇ ವರದಿ ಸಿದ್ಧಪಡಿಸಿ ಸಲ್ಲಿಸಿದ್ದು ಮತ್ತು ನ್ಯಾಯಾಂಗದಲ್ಲಿನ ಅವರ ಕಾರ್ಯದಕ್ಷತೆಯನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಲಿಂಗಾಯತ ಮಹಾಮಠದ ಅಕ್ಕ ಅನ್ನಪೂರ್ಣ ತಿಳಿಸಿದ್ದಾರೆ.

ಪ್ರಶಸ್ತಿಯು ₹ 51 ಸಾವಿರ ನಗದು, ಪ್ರಶಸ್ತಿಪತ್ರ ಹಾಗೂ ಶ್ರೀಫಲವನ್ನು ಒಳಗೊಂಡಿದೆ. ಫೆ.19ರಂದು ನಡೆಯಲಿರುವ ವಚನ ವಿಜಯೋತ್ಸವದ ಸಮಾರೋಪ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು ಎಂದು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.