
ಪ್ರಜಾವಾಣಿ ವಾರ್ತೆ
ಬಸವಕಲ್ಯಾಣ: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಅಧ್ಯಕ್ಷ ಗುರುನಾಥ ಗಡ್ಡೆ ಹಾಗೂ ನಿವೃತ್ತ ಉಪನ್ಯಾಸಕಿ ವಿಜಯಲಕ್ಷ್ಮಿ ಗಡ್ಡೆ ದಂಪತಿಯನ್ನು ‘ವಚನ ಪಿತಾಮಹ ಫ.ಗು.ಹಳಕಟ್ಟಿ ವಚನ ಟಿವಿ ರಾಷ್ಟ್ರೀಯ ಪುರಸ್ಕಾರ’ಕ್ಕೆ ಆಯ್ಕೆ ಮಾಡಲಾಗಿದೆ.
ದುಬೈನಲ್ಲಿ ನವೆಂಬರ್ 29 ರಂದು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಗದಗ ತೋಂಟದ ಸಿದ್ದರಾಮ ಸ್ವಾಮೀಜಿ, ಸಾಣೆಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯರು ಮತ್ತು ಇಳಕಲ್ ಗುರುಮಹಾಂತ ಸ್ವಾಮೀಜಿ ನೇತೃತ್ವದ ಆಯ್ಕೆ ಸಮಿತಿಯು ಅನುಭಾವ ಮಿಡಿಯಾ ಹೌಸ್ ಅಸೋಷಿಯೇಷನ್ ಸಂಚಾಲಕ ಸಿದ್ದು ಯಾಪಲಪರ್ವಿ ಅವರ ವಚನ ಟಿವಿ ವತಿಯಿಂದ ನೀಡುವ ವಿವಿಧ ಪ್ರಶಸ್ತಿಗಳಿಗೆ ಸಾಧಕರ ಹೆಸರು ಘೋಷಿಸಿದೆ ಎಂದು ಅಲ್ಲಮಪ್ರಭು ನಾವದಗೆರೆ ಮತ್ತು ಎಸ್.ಎಂ.ಸುರೇಶ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.