ADVERTISEMENT

ಬೀದರ್: ಗುರಿ ಸಾಧನೆಗೆ ಗುರುವಿನ ಮಾರ್ಗದರ್ಶನ ಅಗತ್ಯ

ವಿದ್ಯಾರ್ಥಿಗಳ ಸ್ವಾಗತ ಸಮಾರಂಭದಲ್ಲಿ ಭತಮುರ್ಗೆ ಅಭಿಮತ

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2021, 6:24 IST
Last Updated 3 ಅಕ್ಟೋಬರ್ 2021, 6:24 IST
ಬೀದರ್‌ ಚಂದ್ರಪ್ಪ ಗೌರಶೆಟ್ಟಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಪಿಯು ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಹಾಗೂ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಪ್ರಾಚಾರ್ಯ ಚಂದ್ರಪ್ಪ ಭತಮುರ್ಗೆ ಉದ್ಘಾಟಿಸಿದರು
ಬೀದರ್‌ ಚಂದ್ರಪ್ಪ ಗೌರಶೆಟ್ಟಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಪಿಯು ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಹಾಗೂ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಪ್ರಾಚಾರ್ಯ ಚಂದ್ರಪ್ಪ ಭತಮುರ್ಗೆ ಉದ್ಘಾಟಿಸಿದರು   

ಬೀದರ್: ಜೀವನದ ಗುರಿ ಸಾಧನೆಗೆ ಕಠಿಣ ಪರಿಶ್ರಮ ಹಾಗೂ ಗುರುವಿನ ಮಾರ್ಗದರ್ಶನ ಅಗತ್ಯ ಎಂದು ಪ್ರಾಚಾರ್ಯ ಚಂದ್ರಪ್ಪ ಭತಮುರ್ಗೆ ಅಭಿಪ್ರಾಯಪಟ್ಟರು.

ನಗರದ ಚಂದ್ರಪ್ಪ ಗೌರಶೆಟ್ಟಿ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಂದ ಆಯೋಜಿಸಿದ್ದ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಹಾಗೂ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಧರ್ಮ ಹಾಗೂ ಕೀರ್ತಿ ಶಾಶ್ವತ ಮೌಲ್ಯಗಳಾಗಿವೆ. ವಿದ್ಯಾರ್ಥಿಗಳು ಆದರ್ಶ ವ್ಯಕ್ತಿತ್ವ ರೂಪಿಸಿಕೊಳ್ಳಲು ಪ್ರಯತ್ನಿಸಬೇಕು ಎಂದು ಹೇಳಿದರು.

ADVERTISEMENT

ಕಾರ್ಯಕ್ರಮ ಉದ್ಘಾಟಿಸಿದ ಸಿದ್ಧಾರೂಢ ಮಹಿಳಾ ಪದವಿ ಕಾಲೇಜು ಪ್ರಾಚಾರ್ಯ ಮಾಣಿಕರಾವ್ ಪಂಚಾಳ ಮಾತನಾಡಿ, ಶಿಷ್ಯನ ಅಜ್ಞಾನ ಕಳೆದು ಸುಜ್ಞಾನಿಯನ್ನಾಗಿ ಮಾಡುವ ಶಕ್ತಿ ಗುರುವಿಗೆ ಇದೆ. ಹೀಗಾಗಿ ಗುರುವನ್ನು ಗೌರವಿಸಬೇಕು. ಅವರು ಹಾಕಿಕೊಟ್ಟ ಮಾರ್ಗದಲ್ಲಿ ಸಾಗಬೇಕು ಎಂದು ತಿಳಿಸಿದರು.

ಶ್ರೀಮತಿ ಇಂದಿರಾಬಾಯಿ ಗುರುತಪ್ಪ ಶೆಟಕಾರ ಪ್ರೌಢಶಾಲೆ ಮುಖ್ಯ ಶಿಕ್ಷಕ ಲಕ್ಷ್ಮಣ ಪೂಜಾರಿ ಮಾತನಾಡಿ, ಸಂಸ್ಕಾರ ಇಲ್ಲದ ಶರೀರ ಜೀವಂತ ಶವ ಇದ್ದಂತೆ. ವಿದ್ಯಾರ್ಥಿಗಳು ದೇಶಪ್ರೇಮ, ಭಾಷಾ ಪ್ರೇಮ, ಬಂಧು ಪ್ರೇಮ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

ವತ್ರ ತಿಪ್ಪೆಯೊಳಗಿದ್ದರೂ ಹೊಳೆಯುತ್ತದೆ. ಹಾಗೆಯೇ ವಿದ್ಯಾರ್ಥಿಗಳು ಮೌಲ್ಯಯುತ ಶಿಕ್ಷಣ ಪಡೆದು ಪ್ರಕಾಶಿಸಬೇಕು ಎಂದು ತಿಳಿಸಿದರು.

ಉಪನ್ಯಾಸಕ ರಮೇಶ ಪಾಟೀಲ ಚಟ್ನಳ್ಳಿ ಮಾತನಾಡಿ, ವರ್ಷಕ್ಕೊಮ್ಮೆ ಶಿಕ್ಷಕರ ದಿನ ಆಚರಿಸಿದರೆ ಸಾಲದು. ಗುರು ಆದವರು ರಾಧಾಕೃಷ್ಣನ್ ಅವರ ಆದರ್ಶಗಳನ್ನು ಪಾಲಿಸಬೇಕು ಎಂದು ಹೇಳಿದರು.

ಪ್ರತಿಭಾವಂತ ವಿದ್ಯಾರ್ಥಿಗಳಾದ ಅಂಜಲಿ, ವೆಂಕಟೇಶ ಅವರನ್ನು ಸನ್ಮಾನಿಸಲಾಯಿತು.

ಉಪನ್ಯಾಸಕರಾದ ಶಶಿಕಾಂತ ಪಂತ್, ಎಸ್.ಎಂ. ಐನಾಪುರ, ಈರಣ್ಣ ಕೆ, ಚಂದ್ರಕಲಾ, ವಿಜಯಕುಮಾರ ಲಕ್ಕಾ, ನಾಗನಾಥ ಕೊಳ್ಳಾ, ಶಿವಪುತ್ರ ಶಿನ್ನೂರ ಇದ್ದರು. ಬಸವರಾಜ ಹೆಗ್ಗೆ ನಿರೂಪಿಸಿದರು. ಗೌತಮ ಭೋಸ್ಲೆ ವಂದಿಸಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.