ADVERTISEMENT

20ರಂದು ಹುಮನಾಬಾದ್ ಬಂದ್

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2022, 5:15 IST
Last Updated 17 ಸೆಪ್ಟೆಂಬರ್ 2022, 5:15 IST

ಹುಮನಾಬಾದ್: ‘ಸ್ಥಳೀಯ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ವೀರಶೈವ ಲಿಂಗಾಯತ ಸಮುದಾಯಕ್ಕೆ ಸೇರಿದ ಜಂಗಮರಿಗೆ ಪರಿಶಿಷ್ಟ ಜಾತಿ ಪ್ರಮಾಣಪತ್ರ ನೀಡುವಂತೆ ಸಮಾಜ ಕಲ್ಯಾಣ ಸಚಿವರಿಗೆ ಶಿಫಾರಸು ಮಾಡಿರುವುದನ್ನು ಖಂಡಿಸಿ 20ರಂದು ಹುಮನಾಬಾದ್ ಬಂದ್ ಮಾಡಲಾಗುತ್ತಿದೆ’ ಎಂದು ದಲಿತ ಹೋರಾಟ ಕ್ರಿಯಾ ಸಮಿತಿ ಅಧ್ಯಕ್ಷ ಅಂಕುಶ್ ಗೋಖಲೆ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,‘ಶಾಸಕ ರಾಜಶೇಖರ ಪಾಟೀಲ, ವಿಧಾನ ಪರಿಷತ್‌ ಸದಸ್ಯರಾದ ಚಂದ್ರಶೇಖರ ಪಾಟೀಲ ಹಾಗೂ ಭೀಮರಾವ್ ಪಾಟೀಲ ಅವರು ಮಡಿವಂತಿಕೆ ಮಾಡುವವರಿಗೆ ಮೀಸಲಾತಿ ನೀಡುವಂತೆ ಶಿಫಾರಸು ಮಾಡಿರು ವುದು ಸಮಾಜದ ಆಕ್ರೋಶಕ್ಕೆ ಕಾರಣವಾಗಿದೆ’ಎಂದು ಅವರು ಹೇಳಿದರು.

‘20ರಂದು ಬೆಳಿಗ್ಗೆ 10 ಗಂಟೆಗೆ ಪಟ್ಟಣದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಹೀಗಾಗಿ ಸಮಾಜದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು’ ಎಂದು ಮನವಿ ಮಾಡಿದರು.

ADVERTISEMENT

ಲಕ್ಷ್ಮೀಪುತ್ರ ಮಾಳಗೆ, ಗೌತಮ್ ಸಾಗರ, ಅನೀಲ ದೊಡ್ಡಿ, ಗೌತಮ್ ಪ್ರಸಾದ್, ಗೌತಮ್ ಚೌವಾಣ್ ಸೇರಿದಂತೆ ಇತರರು ಈ ವೇಳೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.