ADVERTISEMENT

ಸಂಗೀತದಿಂದ ರೋಗ ನಿವಾರಣೆ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2022, 15:27 IST
Last Updated 24 ಸೆಪ್ಟೆಂಬರ್ 2022, 15:27 IST
ಬೀದರ್ ತಾಲ್ಲೂಕಿನ ಅಲಿಯಂಬರ್ ಗ್ರಾಮದಲ್ಲಿ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಸೂರ್ಯಕಾಂತ ನಾಗಮಾರಪಳ್ಳಿ ಉದ್ಘಾಟಿಸಿದರು
ಬೀದರ್ ತಾಲ್ಲೂಕಿನ ಅಲಿಯಂಬರ್ ಗ್ರಾಮದಲ್ಲಿ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಸೂರ್ಯಕಾಂತ ನಾಗಮಾರಪಳ್ಳಿ ಉದ್ಘಾಟಿಸಿದರು   

ಜನವಾಡ: ಸಂಗೀತಕ್ಕೆ ರೋಗ ನಿವಾರಣೆ ಶಕ್ತಿ ಇದೆ ಎಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಸೂರ್ಯಕಾಂತ ನಾಗಮಾರಪಳ್ಳಿ ಹೇಳಿದರು.
ಬೀದರ್ ತಾಲ್ಲೂಕಿನ ಅಲಿಯಂಬರ್ ಗ್ರಾಮದಲ್ಲಿ ನಡೆದ ಸಂಗೀತ ದರ್ಬಾರ್ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸಂಗೀತ ಮನಸ್ಸಿಗೆ ಮುದ ನೀಡುತ್ತದೆ ಎಂದರು.
ಡಿಸಿಸಿ ಬ್ಯಾಂಕ್ ನಿರ್ದೇಶಕ ಸಂಗಮೇಶ ಪಾಟೀಲ, ಗ್ರಾಮ ಪಂಚಾಯಿತಿ ಅಧ್ಯಕ್ಷ ಮಹೇಶ ಬಿರಾದಾರ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ದೀಪಕ್ ಗಾದಗೆ, ಸಿಪಿಐ ಶ್ರೀಕಾಂತ ಅಲ್ಲಾಪುರೆ, ಜನವಾಡ ಪಿಎಸ್‍ಐ ಶಿವರಾಜ ಪಾಟೀಲ, ಸಿದ್ದು ಲೌಟೆ, ರಾಜೇಂದ್ರ ಪೂಜಾರಿ, ಮಂಗಲಾ ಮಹಿಳಾ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷೆ ಮಂಗಲಾ ಮರಕಲೆ, ಕಲಾವಿದರಾದ ನಿರ್ಮಲಾ ದಿಗಂಬರ್, ಸವಿತಾ, ಸುಂದ್ರಮ್ಮ, ಕಮಳಮ್ಮ, ಶಶಿಕಲಾ, ತೇಜಮ್ಮ, ಚಂದ್ರಕಾಂತ ಬಿರಾದಾರ ಇದ್ದರು.
ಮಂಗಲಾ ಮಹಿಳಾ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.