ಪ್ರಜಾವಾಣಿ ಚಿತ್ರಗಳು; ಲೋಕೇಶ ವಿ. ಬಿರಾದಾರ
ಬೀದರ್: ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಬಿಟ್ಟೂ ಬಿಡದೇ ಮಳೆ ಸುರಿಯುತ್ತಿದ್ದು, ಸತತ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ.
ಬುಧವಾರ ಸಂಜೆಯಿಂದ ರಾತ್ರಿವರೆಗೆ ಸುರಿದ ಮಳೆ, ನಸುಕಿನ ಜಾವದ ವರೆಗೆ ಬಿಡುವು ನೀಡಿತು. ಪುನಃ ಆರಂಭಗೊಂಡ ಮಳೆ ಸತತವಾಗಿ ಸುರಿಯುತ್ತಿದೆ.
ಮಳೆಯಿಂದ ದೈನಂದಿನ ಕೆಲಸಗಳಿಗೆ ಹೋಗುವವರು ಪರದಾಟ ನಡೆಸಿದರು. ಪ್ರಮುಖ ರಸ್ತೆಗಳಲ್ಲಿ ಅಪಾರ ನೀರು ಸಂಗ್ರಹಗೊಂಡಿದ್ದರಿಂದ ವಾಹನಗಳು ನಿಧಾನ ಗತಿಯಲ್ಲಿ ಸಂಚರಿಸುತ್ತಿವೆ.
ನಗರದ ನೆಹರೂ ಕ್ರೀಡಾಂಗಣದಲ್ಲಿ ಅಪಾರ ನೀರು ಸಂಗ್ರಹಗೊಂಡಿದ್ದರಿಂದ ಕೆರೆಯಂತಾಗಿದೆ. ನಗರದ ಡಿಎಚ್ಒ ಕಚೇರಿ ಪ್ರಾಂಗಣದಲ್ಲೂ ಹೆಚ್ಚಿನ ನೀರು ನಿಂತಿದ್ದು, ಓಡಾಟಕ್ಕೆ ಅಲ್ಲಿನ ಸಿಬ್ಬಂದಿ ತೊಂದರೆ ಅನುಭವಿಸಿದರು.
ಸತತ ಮಳೆಗೆ ವಾತಾವರಣ ಸಂಪೂರ್ಣ ತಂಪಾಗಿದೆ. ಬಿಸಿಲಿನಿಂದ ಕಂಗೆಟ್ಟಿದ ಜನ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.