ಮಳೆ (ಸಾಂದರ್ಭಿಕ ಚಿತ್ರ)
ಎ,ಐ ಚಿತ್ರ
ಬೀದರ್: ಭಾನುವಾರ ರಾತ್ರಿಯಿಡೀ ಎಡೆಬಿಡದೆ ಮಳೆ ಸುರಿದ ಪರಿಣಾಮ ಜನಜೀವನ ಅಸ್ತವ್ಯಸ್ತಗೊಂಡಿದೆ.
ಭಾನುವಾರ ರಾತ್ರಿ ಒಂಬತ್ತು ಗಂಟೆ ಸುಮಾರಿಗೆ ಆರಂಭಗೊಂಡ ಮಳೆ ಇಡೀ ರಾತ್ರಿ ಸುರಿದಿದೆ. ಸೋಮವಾರ ಬೆಳಿಗ್ಗೆಯಿಂದ ಜಿಟಿಜಿಟಿ ಮಳೆಯಾಗುತ್ತಿದೆ.
ಶ್ರಾವಣ ಮಾಸದ ಕೊನೆ ಸೋಮವಾರ ಹೆಚ್ಚಿನ ಸಂಖ್ಯೆಯ ಭಕ್ತರು ದೇವಸ್ಥಾನಕ್ಕೆ ಭೇಟಿ ಕೊಡುತ್ತಾರೆ. ಆದರೆ, ಮಳೆಯ ಕಾರಣ ಸಂಖ್ಯೆ ತಗ್ಗಿದೆ. ಬೆಳಿಗ್ಗೆಯಿಂದ ಮಳೆ ಸುರಿಯುತ್ತಿರುವ ಕಾರಣ ಶಾಲಾ-ಕಾಲೇಜು ಸೇರಿದಂತೆ ದೈನಂದಿನ ಕೆಲಸಕ್ಕೆ ಹೋಗುವವರು ಸಮಸ್ಯೆ ಎದುರಿಸಿದರು.
ಮಳೆಗೆ ತಗ್ಗು ಪ್ರದೇಶದಲ್ಲಿ ಅಪಾರ ನೀರು ಸಂಗ್ರಹಗೊಂಡಿದೆ. ಹೆಚ್ಚಿನ ರಸ್ತೆಗಳು ಹಾಳಾಗಿದ್ದು, ಆಳುದ್ದದ ಗುಂಡಿಗಳು ಬಿದ್ದಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.