ರಸ್ತೆ ಮಧ್ಯೆ ನೀರಿನಲ್ಲಿ ಸಾರಿಗೆ ಸಂಸ್ಥೆ ಬಸ್ ಸಿಲುಕಿಕೊಂಡಿರುವುದು
ಬೀದರ್: ನಗರ ಸೇರಿದಂತೆ ಗ್ರಾಮೀಣ ಭಾಗಗಳಲ್ಲಿ ಗುಡುಗು ಸಹಿತ ಬಿರುಸಿನ ಮಳೆಯಾಗುತ್ತಿದೆ.
ಶನಿವಾರ ರಾತ್ರಿ ಎಂಟು ಗಂಟೆಗೆ ಶುರುವಾದ ಜೋರು ಮಳೆ ರಾತ್ರಿ ಹತ್ತು ಗಂಟೆಯ ನಂತರವೂ ಮುಂದುವರೆದಿದೆ.
ನಗರದ ಮನ್ನಳ್ಳಿ ರಸ್ತೆ ಹಾರೂರಗೇರಿ ಕ್ರಾಸ್, ವಿದ್ಯಾನಗರ, ಮೈಲೂರ್ ಕ್ರಾಸ್, ಕುಂಬಾರವಾಡ ಕ್ರಾಸ್, ಬೊಮ್ಮಗೊಂಡೇಶ್ವರ ವೃತ್ತದಲ್ಲಿ ಅಪಾರ ಪ್ರಮಾಣದ ನೀರು ಸಂಗ್ರಹಗೊಂಡಿದ್ದರಿಂದ ವಾಹನ ಸವಾರರು ಪರದಾಡಿದರು.
ಜಿಲ್ಲೆಯ ಚಿಟಗುಪ್ಪ ತಾಲ್ಲೂಕಿನ ಮನ್ನಾಏಖ್ಖೆಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ ಮೇಲ್ಸೇತುವೆ ಕೆಳಗಿನ ರಸ್ತೆ ಸಂಪೂರ್ಣ ಜಲಾವೃತವಾಗಿದ್ದರಿಂದ ರಸ್ತೆ ಸಂಚಾರ ಸ್ಥಗಿತಗೊಂಡಿತ್ತು. ಇದರಿಂದ ಹೈದರಾಬಾದ್, ಮುಂಬೈ, ಚಿಂಚೋಳಿ, ಬೀದರ್ ಕಡೆಗೆ ಹೋಗುವವರು ತೀವ್ರ ಸಮಸ್ಯೆ ಎದುರಿಸಿದರು. ಅನೇಕ ವಾಹನಗಳು ನೀರಿನೊಳಗೆ ಸಿಲುಕಿಕೊಂಡಿದ್ದವು.
ಚಿಟಗುಪ್ಪ ತಾಲ್ಲೂಕಿನ ಮನ್ನಾಏಖ್ಖೆಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ ಮೇಲ್ಸೇತುವೆ ಕೆಳಗಿನ ರಸ್ತೆ ಜಲಾವೃತವಾಗಿದ್ದರಿಂದ ವಾಹನ ಸಂಚಾರ ನಿಂತು ಹೋಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.