ಬೀದರ್: ಜಿಲ್ಲೆಯ ಔರಾದ್ ತಾಲ್ಲೂಕಿನ ಗ್ರಾಮೀಣ ಭಾಗಗಳಲ್ಲಿ ಶುಕ್ರವಾರ ಬಿರುಸಿನ ಮಳೆಯಾಗಿದೆ.
ಔರಾದ್ ತಾಲ್ಲೂಕಿನ ಜೋಜನಾ ಗ್ರಾಮದ ಹತ್ತಕ್ಕೂ ಹೆಚ್ಚು ಮನೆಗಳಿಗೆ ಮಳೆ ನೀರು ನುಗ್ಗಿ ಸಮಸ್ಯೆ ಉಂಟಾಗಿದೆ. ಮನೆಯೊಳಗಿದ್ದ ಬಿತ್ತನೆ ಬೀಜ, ರಸಗೊಬ್ಬರ, ದವಸ ಧಾನ್ಯ ಸೇರಿದಂತೆ ಇತರೆ ವಸ್ತುಗಳು ಹಾಳಾಗಿವೆ. ಬೀದರ್ ನಗರ ಹಾಗೂ ತಾಲ್ಲೂಕಿನ ಹಲವೆಡೆ ಶುಕ್ರವಾರ ಮಳೆಯಾಗಿದೆ. ದಿನವಿಡೀ ಮೋಡ ಕವಿದ ವಾತಾವರಣ ಇತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.