ಬೀದರ್ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೀಡಾದ ಗ್ರಾಮಗಳಿಗೆ ಸಚಿವ ಈಶ್ವರ ಬಿ. ಖಂಡ್ರೆ ಭೇಟಿ ನೀಡಿದರು.
ಬೀದರ್: ಕಳೆದ ವಾರವಿಡೀ ಎಡೆಬಿಡದೆ ಸುರಿದ ಮಳೆಯಿಂದ ಹಾನಿಗೀಡಾದ ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ, ಪೌರಾಡಳಿತ ಸಚಿವ ರಹೀಂ ಖಾನ್ ಅವರು ಸೋಮವಾರ ಭೇಡಿ ನೀಡಿ ಪರಿಶೀಲನೆ ನಡೆಸಿದರು.
ತಾಲ್ಲೂಕಿನ ಕಾಶೆಂಪುರ್, ಕಾಡವಾದ, ಚಟ್ನಳ್ಳಿ ಗ್ರಾಮಗಳಿಗೆ ಭೇಟಿ ಕೊಟ್ಟು,ಮಳೆಗೆ ಕುಸಿದು ಬಿದ್ದ ಮನೆಗಳ ಪರಿಸ್ಥಿತಿಯನ್ನು ವೀಕ್ಷಿಸಿ, ಮನೆ ಮಾಲೀಕರುಗಳಿಗೆ ಸರ್ಕಾರದ ಮಾನದಂಡಗಳ ಪ್ರಕಾರ ಪರಿಹಾರ ಕೊಡಿಸಲಾಗುವುದು ಎಂದು ಭರವಸೆ ನೀಡಿದರು.
ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ್ ಬದೋಲೆ, ಉಪವಿಭಾಗಾಧಿಕಾರಿ ಲವೀಶ್ ಒರ್ಡಿಯಾ ಸೇರಿದಂತೆ ಜಿಲ್ಲಾಮಟ್ಟದ ಇತರೆ ಅಧಿಕಾರಿಗಳು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.