ADVERTISEMENT

ಮಕ್ಕಳ ಸಮಸ್ಯೆಗಳಿಗೆ ಸಹಾಯವಾಣಿ ಸಹಕಾರಿ

1098 ದಿನಾಚರಣೆ, ಜಾಗೃತಿ ಜಾಥಾಕ್ಕೆ ಚಾಲನೆ: ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 19 ಮೇ 2022, 3:15 IST
Last Updated 19 ಮೇ 2022, 3:15 IST
ಬೀದರ್‌ನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಡೆದ ಮಕ್ಕಳ ಸಹಾಯವಾಣಿ ಕೇಂದ್ರದ ಜಾಥಾದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ರವೀಂದ್ರ ರತ್ನಾಕರ ಪ್ರತಿಜ್ಞೆ ಬೋಧಿಸಿದರು. ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ, ಶಶಿಧರ ಕೋಸಂಬೆ, ರವೀಂದ್ರ ರತ್ನಾಕರ, ನೆಲ್ಸನ್, ಗೌರಿಶಂಕರ ಪ್ರತಾಪುರೆ ಇದ್ದಾರೆ
ಬೀದರ್‌ನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಡೆದ ಮಕ್ಕಳ ಸಹಾಯವಾಣಿ ಕೇಂದ್ರದ ಜಾಥಾದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ರವೀಂದ್ರ ರತ್ನಾಕರ ಪ್ರತಿಜ್ಞೆ ಬೋಧಿಸಿದರು. ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ, ಶಶಿಧರ ಕೋಸಂಬೆ, ರವೀಂದ್ರ ರತ್ನಾಕರ, ನೆಲ್ಸನ್, ಗೌರಿಶಂಕರ ಪ್ರತಾಪುರೆ ಇದ್ದಾರೆ   

ಬೀದರ್‌: ‘ಮಕ್ಕಳ ಸಮಸ್ಯೆಗಳ ನಿವಾರಣೆಗೆ ಸಹಾಯವಾಣಿ ಸಹಕಾರಿಯಾಗಿದೆ’ ಎಂದು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಕ್ಕಳ ಮತ್ತು ಮಹಿಳಾ ಅಭಿವೃದ್ಧಿ ಇಲಾಖೆ ಹಾಗೂ ಮಕ್ಕಳ ಸಹಾಯವಾಣಿ ಕೇಂದ್ರದ ಆಶ್ರಯದಲ್ಲಿ ಮಕ್ಕಳ ಸಹಾಯವಾಣಿ ಕೇಂದ್ರ 1098 ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡಿದ್ದ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಬೀದರ್ ಅನ್ನು ಮಕ್ಕಳ ಸಮಸ್ಯೆ ಮುಕ್ತ ಜಿಲ್ಲೆಯಾಗಿ ಮಾಡುವ ಗುರಿ ಇಟ್ಟುಕೊಳ್ಳಲಾಗಿದೆ. ಇದಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ ಎಂದು ತಿಳಿಸಿದರು.

ADVERTISEMENT

ಜಿಲ್ಲೆಯ ಯಾವುದೇ ಭಾಗದಲ್ಲಿ ಬಾಲ್ಯ ವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿ ಕಂಡುಬಂದಲ್ಲಿ ತಕ್ಷಣವೇ ಮಕ್ಕಳ ಸಹಾಯವಾಣಿ ಕೇಂದ್ರ ಸಂಖ್ಯೆ 1098 ಗೆ ಕರೆ ಮಾಡಬಹುದು. ಕರೆ ಮಾಡಿರುವ ವ್ಯಕ್ತಿಯ ಹೆಸರನ್ನು ಗೋಪ್ಯವಾಗಿ ಇಡಲಾಗುವುದು ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಸಿಇಒ ಮಕ್ಕಳ ಸಹಾಯವಾಣಿ ಕೇಂದ್ರದ ಭಿತ್ತಿ ಪತ್ರ ಬಿಡುಗಡೆ ಮಾಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ರವೀಂದ್ರ ರತ್ನಾಕರ ಪ್ರತಿಜ್ಞೆ ಬೋಧಿಸಿದರು. ಮುಖ್ಯ ಅತಿಥಿಗಳಾಗಿ ಬಾಲನ್ಯಾಯ ಮಂಡಳಿಯ ಸದಸ್ಯ ಶಶಿಧರ ಕೋಸಂಬೆ ಹಾಗೂ ಮಕ್ಕಳ ಕಲ್ಯಾಣ ಸಮಿತಿ ಸದಸ್ಯೆ ರಜಿಯಾ ಬಳಬಟ್ಟಿ ಭಾಗವಹಿಸಿದ್ದರು.

ಡಾನ್ ಬಾಸ್ಕೊ ಸಂಸ್ಥೆಯ ನೇಲಸನ, ಸಹಯೇಗ ಸಂಸ್ಥೆಯ ಶಫಿಯೋದ್ದಿನ್, ಡಾ.ಬಿ.ಆರ್. ಅಂಬೇಡ್ಕರ್ ಸಂಸ್ಥೆಯ ಸುನಿಲ್ ವಾಘಮಾರೆ, ಅರ್ಬಿಟ ಸಂಸ್ಥೆಯ ರವಿ ಕೋಡ್ಡಿಕರ, ಎಲ್ಸಿಪಿಯೊ ವೀನೋದ ಕುರೆ ಹಾಗೂ ಮಕ್ಕಳ ಸಹಾಯವಾಣಿ ಕೇಂದ್ರದ ಸಂಯೋಜಕರು ಇದ್ದರು. ಮಕ್ಕಳ ರಕ್ಷಣಾ ಅಧಿಕಾರಿ ಗೌರಿಶಂಕರ ಪರತಾಪುರೆ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.