ಬೀದರ್: ನಗರದಲ್ಲಿ ಮಹಾಸಾಧ್ವಿ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಅವರ ಪುತ್ಥಳಿ ಪ್ರತಿಷ್ಠಾಪಿಸಬೇಕು ಎಂದು ಶ್ರೀ ಹೇಮ ವೇಮ ರೆಡ್ಡಿ ಜನ ಸಂಘ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದೆ.
ನಗರದಲ್ಲಿ ಬಹುತೇಕ ಎಲ್ಲ ಮಹಾತ್ಮರ ಪುತ್ಥಳಿಗಳನ್ನು ಪ್ರತಿಷ್ಠಾಪಿಸಲಾಗಿದೆ. ಆದರೆ ಹೇಮರಡ್ಡಿ ಮಲ್ಲಮ್ಮ ಅವರ ಪ್ರತಿಮೆ ಇಲ್ಲ. ಯಾವುದಾದರೊಂದು ವೃತ್ತಕ್ಕೆ ಹೇಮರಡ್ಡಿ ಮಲ್ಲಮ್ಮನ ಹೆಸರಿಟ್ಟು ಅಲ್ಲಿ ಪ್ತತಿಮೆ ಸ್ಥಾಪಿಸಲು ಕ್ರಮ ಕೈಗೊಳ್ಳಬೇಕು ಎಂದು ಶ್ರೀ ಹೇಮ ವೇಮ ರೆಡ್ಡಿ ಜನ ಸಂಘದ ಜಿಲ್ಲಾ ಸಂಚಾಲಕ ಅನಂತರೆಡ್ಡಿ ಟಿ. ಮಿರ್ಜಾಪುರ ಜಿಲ್ಲಾಧಿಕಾರಿಗೆ ಸಲ್ಲಿಸಿದ ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.