ADVERTISEMENT

ಬೀದರ್‌: ಕರ್ನಾಟಕ– ಮಹಾರಾಷ್ಟ್ರ ಗಡಿಯಲ್ಲಿ ಕಟ್ಟೆಚ್ಚರ

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2021, 9:39 IST
Last Updated 22 ಫೆಬ್ರುವರಿ 2021, 9:39 IST
   

ಬೀದರ್‌:ಮಹಾರಾಷ್ಟ್ರದಲ್ಲಿ ಕೋವಿಡ್ ಎರಡನೇ ಅಲೆ ಕಾಣಿಸಿಕೊಂಡ ಕಾರಣ ರಾಜ್ಯದ ಗಡಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ಬಸವಕಲ್ಯಾಣ ತಾಲ್ಲೂಕಿನ ಚಂಡಕಾಪುರ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಹಾರಾಷ್ಟ್ರದಿಂದ ಬರುವ ವಾಹನಗಳನ್ನು ತಡೆದು ಜ್ವರ ತಪಾಸಣೆ ನಡೆಸಲಾಗುತ್ತಿದೆ ಹಾಗೂ ನೆಗೆಟಿವ್ ಪ್ರಮಾಣಪತ್ರ ಪರಿಶೀಲಿಸಲಾಗುತ್ತಿದೆ.

ಬ್ಯಾರಿಕೇಡ್ ಅಳವಡಿಸಿ ವಾಹನ ತಡೆಯುತ್ತಿರುವ ಕಾರಣ ಹೆದ್ದಾರಿಯಲ್ಲಿ ವಾಹನಗಳು ಸರತಿ ಸಾಲಿನಲ್ಲಿ ನಿಂತಿರುವುದು ಕಾಣುತ್ತಿದೆ. ಬಸವಕಲ್ಯಾಣ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಪ್ರವೀಣ ಹೂಗಾರ ಹಾಗೂ ಮಂಠಾಳ ಠಾಣೆ ಸಬ್ ಇನ್‌ಸ್ಪೆಕ್ಟರ್ ಜಯಶ್ರೀ ಹೂಡಲ್ ಹಾಗೂ ಸಿಬ್ಬಂದಿ ಸ್ಥಳದಲ್ಲಿದ್ದು ತಪಾಸಣೆ ನಡೆಸುತ್ತಿದ್ದಾರೆ.

ADVERTISEMENT

ಕಮಲನಗರ, ಔರಾದ್ ಹಾಗೂ ಬೀದರ್‌ ತಾಲ್ಲೂಕಿನ ಗಡಿಯಲ್ಲಿ ಇಂದು (ಸೋಮವಾರ) ಸಂಜೆಯಿಂದ ಚೆಕ್‌ಪೋಸ್ಟ್‌ ಆರಂಭಿಸಲು ನಿರ್ಧರಿಸಲಾಗಿದೆ.

ಜಿಲ್ಲಾಧಿಕಾರಿ ರಾಮಚಂದ್ರನ್‌ ಸೋಮವಾರ ಜಿಲ್ಲಾ ಮಟ್ಟದ ಅಧಿಕಾರಿಗಳ ತುರ್ತು ಸಭೆ ನಡೆಸಿ ಗಡಿಯಲ್ಲಿ ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಿದರು. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಿ.ಎಲ್‌.ನಾಗೇಶ. ಜಿಲ್ಲಾ ಸರ್ವೇಕ್ಷೇಣಾಧಿಕಾರಿ ಕೃಷ್ಣಾರೆಡ್ಡಿ, ಪೊಲೀಸ್, ಆರೋಗ್ಯ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.