ADVERTISEMENT

ಹಿಂದಿ ದಿವಸ ಆಚರಣೆಗೆ ವಿರೋಧ

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2022, 13:40 IST
Last Updated 14 ಸೆಪ್ಟೆಂಬರ್ 2022, 13:40 IST
ಹುಮನಾಬಾದ್ ಪಟ್ಟಣದಲ್ಲಿ ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರು ತಹಶೀಲ್ದಾರ್ ಡಾ.ಪ್ರದೀಪಕುಮಾರ್ ಹಿರೇಮಠ ಅವರಿಗೆ ಮನವಿ ಸಲ್ಲಿಸಿದರು
ಹುಮನಾಬಾದ್ ಪಟ್ಟಣದಲ್ಲಿ ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರು ತಹಶೀಲ್ದಾರ್ ಡಾ.ಪ್ರದೀಪಕುಮಾರ್ ಹಿರೇಮಠ ಅವರಿಗೆ ಮನವಿ ಸಲ್ಲಿಸಿದರು   

ಹುಮನಾಬಾದ್: ಹಿಂದಿ ದಿವಸ ಆಚರಣೆ ವಿರೋಧಿಸಿ ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.

ಪಕ್ಷದ ಪ್ರಮುಖರು ಮಾತನಾಡಿ,‘ವಿವಿಧತೆಯಲ್ಲಿ ಏಕತೆ ಹೊಂದಿರುವ ಭಾರತದಲ್ಲಿ ಆಯಾ ಪ್ರದೇಶಕ್ಕೆ ಅನುಗುಣವಾಗಿ ಭಾಷೆಗಳಿಗೆ ಪ್ರಾಮುಖ್ಯತೆ ನೀಡಲಾಗಿದೆ. ಆದರೆ ಈಗ ಕೇವಲ ಒಂದು ಭಾಷೆ ಹೇರುತ್ತಿರುವುದು ಖಂಡನೀಯ’ ಎಂದರು.

ಕರ್ನಾಟಕ ಸರ್ಕಾರ ಯಾವುದೇ ಕಾರಣಕ್ಕೂ ಹಿಂದಿ ದಿವಸ ಆಚರಣೆ ಮಾಡಬಾರದು ಎಂದು ಆಗ್ರಹಿಸಿದರು.

ADVERTISEMENT

ರಾಜ್ಯಪಾಲರಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್ ಡಾ.ಪ್ರದೀಕುಮಾರ್ ಹಿರೇಮಠ ಅವರಿಗೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರಾದ ವೀರೇಶ್ ಸೀಗಿ, ಚಾಂದ್ ಪಾಷ, ಮುಜಬಲ ಹಸ್ಸನ್, ಸತೀಶ ರಾಂಪುರೆ, ಎಂ.ಡಿ.ಶೇಕ್ ಮೀರಾನ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.