ADVERTISEMENT

ಹಿಂದೂ ಜಾಗರಣ ವೇದಿಕೆಯಿಂದ ಪಂಜಿನ ಮೆರವಣಿಗೆ

​ಪ್ರಜಾವಾಣಿ ವಾರ್ತೆ
Published 14 ಆಗಸ್ಟ್ 2024, 15:09 IST
Last Updated 14 ಆಗಸ್ಟ್ 2024, 15:09 IST
   

ಬೀದರ್: ಅಖಂಡ ಭಾರತ ಸಂಕಲ್ಪ ದಿನಾಚರಣೆ ಅಂಗವಾಗಿ ಹಿಂದೂ ಜಾಗರಣ ವೇದಿಕೆ, ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಬುಧವಾರ ರಾತ್ರಿ ಪಂಜಿನ ಮೆರವಣಿಗೆ ನಡೆಸಿದರು.

ನಗರದ ಸರಸ್ವತಿ ಶಾಲೆ ಮೈದಾನದಿಂದ ಆರಂಭಗೊಂಡ ಪಂಜಿನ ಮೆರವಣಿಗೆ ನಗರದ ಶಹಾಗಂಜ್, ಓಲ್ಡ್ ಸಿಟಿ ಮೂಲಕ ಹಾದು ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಸಮಾವೇಶಗೊಂಡಿತು.

ಮುಖಂಡರು, ಕಾರ್ಯಕರ್ತರು ಪಂಜಿನೊಂದಿಗೆ ಹೆಜ್ಜೆ ಹಾಕಿದರು. ಮಾರ್ಗದ ಉದ್ದಕ್ಕೂ ಘೋಷಣೆಗಳನ್ನು ಹಾಕಿದರು.

ADVERTISEMENT

ಹುಲಸೂರಿನ ಶಿವಾನಂದ ಸ್ವಾಮೀಜಿ, ಜೈಭಾರತ್ ಮಾತಾ ಸೇವಾ ಸಮಿತಿ ಅಧ್ಯಕ್ಷ ಹವಾ ಮಲ್ಲಿನಾಥ, ಹಿಂದೂ ಜಾಗರಣ ವೇದಿಕೆ ಪ್ರಾಂತ ಸಹ ಸಂಯೋಜಕ ಶ್ರೀಕಾಂತ ಹೊಸಕೇರೆ, ಜಿಲ್ಲಾ ಸಂಯೋಜಕ ಜಗಮೋಹನ್ ರಾಜಪೂತ್, ಜಿಲ್ಲಾ ಸಹ ಸಂಯೋಜಕ ಸಚಿನ್ ಪಾಟೀಲ ಚಿಮಕೋಡ್, ನಗರ ಸಂಯೋಜಕ ಠಾಕೂರ್ ವೀರೂಸಿಂಹ, ಸನ್ ಸಾಫ್ಟ್ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಅನಿಲ್ ಕುಮಾರ ಚೌದ್ರಿ , ಶಾಸಕ ಡಾ. ಶೈಲೇಂದ್ರ ಕೆ. ಬೆಲ್ದಾಳೆ, ಜಿಲ್ಲಾ ಬಿಜೆಪಿ ಅಧ್ಯಕ್ಷ ಸೋಮನಾಥ ಪಾಟೀಲ, ಬಿಜೆಪಿ ಮುಖಂಡರಾದ ಈಶ್ವರ ಸಿಂಗ್ ಠಾಕೂರ್, ಮಹೇಶ್ವರ ಸ್ವಾಮಿ ಮತ್ತಿತರರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.