ಬೀದರ್ ತಾಲ್ಲೂಕಿನ ಪಾನ್ ಕಾಶೆಂಪುರ್ ಗ್ರಾಮದಲ್ಲಿ ಸತತ ಮಳೆಗೆ ಹಾಳಾದ ಸೋಯಾ ಅವರೆ ಬೆಳೆ ವೀಕ್ಷಿಸಿದ ಬಿ.ವೈ. ವಿಜಯೇಂದ್ರ, ಛಲವಾದಿ ನಾರಾಯಣಸ್ವಾಮಿ
ಬೀದರ್: ‘ಇಡೀ ಹಿಂದೂ ಸಮಾಜ ಒಗ್ಗಟ್ಟಾಗಿ ನಿಲ್ಲುವ ಕಾಲಘಟ್ಟದಲ್ಲಿ ನಾವಿದ್ದೇವೆ. ಸಮಾಜವನ್ನು ಒಡೆಯುವ ಕೆಲಸ ರಾಜಕೀಯ ಪಕ್ಷಗಳು ಹಾಗೂ ರಾಜಕೀಯ ನಾಯಕರು ಮಾಡಬಾರದು. ನಾನು ಅತಿವೃಷ್ಟಿ ವೀಕ್ಷಣೆಗೆ ಬಂದಿರುವೆ. ಜಾತಿವಾರು ಸಮೀಕ್ಷೆ ಬಗ್ಗೆ ಹೆಚ್ಚೇನೂ ಮಾತನಾಡಲ್ಲ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಧರ್ಮದ ಕಾಲಂನಲ್ಲಿ ಏನು ಬರೆಸಬೇಕು ಎಂಬ ವಿಷಯದಲ್ಲಿ ಲಿಂಗಾಯತ ಸಮಾಜದ ಮುಖಂಡರು ನೀಡುತ್ತಿರುವ ಭಿನ್ನ ಹೇಳಿಕೆಗಳ ಬಗ್ಗೆ ನಿಮ್ಮ ನಿಲುವೇನು ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಅವರು ಮೇಲಿನಂತೆ ಉತ್ತರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.