ADVERTISEMENT

ಹಿಂಗಾರು ಬೀಜ ದಿನೋತ್ಸವ

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2022, 14:29 IST
Last Updated 27 ಸೆಪ್ಟೆಂಬರ್ 2022, 14:29 IST
ಬೀದರ್‌ನ ಕೃಷಿ ಸಂಶೋಧನಾ ಕೇಂದ್ರದಲ್ಲಿ ನಡೆದ ಹಿಂಗಾರು ಬೀಜ ದಿನೋತ್ಸವವನ್ನು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಸುನೀಲಕುಮಾರ ಎನ್.ಎಂ. ಸಸಿಗೆ ನೀರೆರೆದು ಉದ್ಘಾಟಿಸಿದರು
ಬೀದರ್‌ನ ಕೃಷಿ ಸಂಶೋಧನಾ ಕೇಂದ್ರದಲ್ಲಿ ನಡೆದ ಹಿಂಗಾರು ಬೀಜ ದಿನೋತ್ಸವವನ್ನು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಸುನೀಲಕುಮಾರ ಎನ್.ಎಂ. ಸಸಿಗೆ ನೀರೆರೆದು ಉದ್ಘಾಟಿಸಿದರು   

ಬೀದರ್: ಇಲ್ಲಿಯ ಕೃಷಿ ಸಂಶೋಧನಾ ಕೇಂದ್ರದಲ್ಲಿ ಬೀಜ ದಿನೋತ್ಸವ ನಡೆಯಿತು.
ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಸುನೀಲಕುಮಾರ ಎನ್.ಎಂ. ಸಸಿಗೆ ನೀರೆರೆದು ಉದ್ಘಾಟಿಸಿದರು. ಕೇಂದ್ರದ ಮುಖ್ಯಸ್ಥ ಡಾ. ಸುನೀಲ್ ಕುಲಕರ್ಣಿ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಹಿಂಗಾರು ಬೆಳೆಗಳಾದ ಕಡಲೆ, ಕುಸುಬೆ ಹಾಗೂ ಜೋಳದಲ್ಲಿ ಬರುವ ಕೀಟ ಹಾಗೂ ರೋಗಗಳ ಕುರಿತು ರೈತರಿಗೆ ಮಾಹಿತಿ ನೀಡಲಾಯಿತು.

ಕೇಂದ್ರದ ಸಹಾಯಕ ಪ್ರಾಧ್ಯಾಪಕ ಡಾ. ಜ್ಞಾನದೇವ ಬುಳ್ಳಾ, ಬಸವರಾಜ ಬಿರಾದಾರ, ಕೃಷಿ ವಿಜ್ಞಾನಿಗಳಾದ ಡಾ. ಆರ್.ಎಲ್. ಜಾಧವ್, ಡಾ. ಶೋಭಾರಾಣಿ, ಡಾ. ಸಿದ್ರಾಮಪ್ಪ, ಡಾ. ಜ್ಞಾನದೇವ ಬುಳ್ಳಾ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.