ಬೀದರ್: ವಾಯು ವಿಹಾರ ಮುಗಿಸಿಕೊಂಡು ಮನೆಗೆ ಹಿಂತಿರುಗುವಾಗ ಹಿಂದಿನಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ಕುಂಬಾರವಾಡದಲ್ಲಿ ಗುರುವಾರ ನಡೆದಿದೆ.
ಭೀಮಣ್ಣ ಮಡಿವಾಳ (76) ಮೃತ ವ್ಯಕ್ತಿ. ಅತಿ ವೇಗದಲ್ಲಿ ಕಾರು ಬಂದು ಗುದ್ದಿದ್ದರಿಂದ ಮೂವತ್ತು ಅಡಿಗಳಿಗೂ ಹೆಚ್ಚು ದೂರ ಹೋಗಿ ಬಿದ್ದಿದ್ದಾರೆ. ಈ ದೃಶ್ಯ ಸಿಸಿಟಿವಿಯಲ್ಲಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಗಾಂಧಿ ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.