ಹುಮನಾಬಾದ್: ತಾಲ್ಲೂಕಿನ ಧುಮ್ಮನಸೂರ್ ಗ್ರಾಮದಲ್ಲಿ ಈಚೆಗೆ ಸುರಿದ ಮಳೆಯಿಂದ ಮನೆ ಕುಸಿದುಬಿದ್ದಿರುವ ಕುಟುಂಬದ ಸದಸ್ಯರಿಗೆ ಬಿಜೆಪಿ ಮುಖಂಡ ಡಾ.ಸಿದ್ದು ಪಾಟೀಲ ವೈಯಕ್ತಿಕವಾಗಿ ₹20 ಸಾವಿರ ನೆರವು ನೀಡಿದ್ದಾರೆ.
ಪ್ರಕಾಶ ಭೋಮಶೆಟ್ಟಿ (38) ನಿಧನ ಹೊಂದಿರುವ ಮರುದಿನವೇ ಅವರ ಮನೆ ಮಳೆಯಿಂದ ಕುಸಿದು ಬಿದ್ದಿದೆ. ಈ ವಿಷಯವನ್ನು ತಿಳಿದು ಬಿಜೆಪಿ ಮುಖಂಡ ಡಾ.ಸಿದ್ದು ಪಾಟೀಲ ಬುಧವಾರ ಗ್ರಾಮಕ್ಕೆ ಭೇಟಿ ನೀಡಿ ಅವರ ಪತ್ನಿಗೆ ಧೈರ್ಯವನ್ನು ಹೇಳಿದರು. ಮನೆಯ ದುರಸ್ತಿ ಮಾಡುವ ಭರವಸೆ ನೀಡಿದ್ದಾರೆ.
ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಬಾಬು ಟೈಗರ್, ಗಿರೀಶ್ ತುಂಬಾ, ಶ್ರೀನಾಥ ದೇವಣಗಿ, ಗ್ರಾಮ ಪಂಚಾಯಿತಿ ಸದಸ್ಯ ಸುನೀಲ, ಶಿವಕುಮಾರ ಚಂದು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.