ADVERTISEMENT

ಲೈಂಗಿಕ ಅಲ್ಪಸಂಖ್ಯಾತರಿಗೆ ಸೂರು: ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಭರವಸೆ

​ಪ್ರಜಾವಾಣಿ ವಾರ್ತೆ
Published 21 ಡಿಸೆಂಬರ್ 2021, 15:51 IST
Last Updated 21 ಡಿಸೆಂಬರ್ 2021, 15:51 IST
ಬೀದರ್‌ನ ಕೃಷ್ಣ ರಿಜೆನ್ಸಿ ಸಭಾಂಗಣದಲ್ಲಿ ಆಯೋಜಿಸಿದ್ದ ಲೈಂಗಿಕ ಅಲ್ಪಸಂಖ್ಯಾತರ ಸೌಹಾರ್ದ ಸಮುದಾಯ ಹಬ್ಬ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ರಾಮಚಂದ್ರನ್‌ ಆರ್‌ ಮಾತನಾಡಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿದ್ರಾಮ ಟಿ.ಪಿ , ಕೆ.ಎಂ. ಸತೀಶ, ಶಿವಕುಮಾರ, ಮಂಗಲಾ ಭಾಗವತ್, ಪುನೀತ್ ಸಾಳೆ, ನಿಶಾ ಇದ್ದರು

ಬೀದರ್: ತಮಗೆ ಸೂರು ಒದಗಿಸಿಕೊಡಬೇಕು ಎನ್ನುವ ಲೈಂಗಿಕ ಅಲ್ಪಸಂಖ್ಯಾತರ ಬಹುದಿನಗಳ ಬೇಡಿಕೆಗೆ ಸ್ಪಂದಿಸಲಾಗುವುದು ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಭರವಸೆ ನೀಡಿದರು.

ಸಂಗಮ ಹಾಗೂ ಸಂಘ ಮಿತ್ರ ಸೇವಾ ಸಂಸ್ಥೆಗಳ ಆಶ್ರಯದಲ್ಲಿ ನಗರದ ಕೃಷ್ಣ ರಿಜೆನ್ಸಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಲೈಂಗಿಕ ಅಲ್ಪಸಂಖ್ಯಾತರ ಸೌಹಾರ್ದ ಸಮುದಾಯ ಹಬ್ಬ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಇಡೀ ರಾಜ್ಯದಲ್ಲೇ ಮೊದಲ ಬಾರಿಗೆ ಜಿಲ್ಲೆಯಲ್ಲಿ ಟಿಜಿ ಕಾರ್ಡ್‍ಗಳನ್ನು ವಿತರಿಸಲಾಗಿದೆ. ಲೈಂಗಿಕ ಅಲ್ಪಸಂಖ್ಯಾತರಿಗೆ ಸುರಕ್ಷಿತ ವಾತಾವರಣ ಕಲ್ಪಿಸಿಕೊಡಲಾಗುತ್ತಿದೆ ಎಂದು ಹೇಳಿದರು.

ADVERTISEMENT

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿದ್ರಾಮ ಟಿ.ಪಿ, ಡಿವೈಎಸ್‍ಪಿ ಕೆ.ಎಂ. ಸತೀಶ, ಭಾರತೀಯ ಅಂಚೆ ಇಲಾಖೆಯ ಮಂಗಲಾ ಭಾಗವತ್, ಸಂಗಮ ಸಂಸ್ಥೆಯ ಕಾರ್ಯಕ್ರಮ ವ್ಯವಸ್ಥಾಪಕಿ ನಿಶಾ, ಜಿಲ್ಲಾ ಸ್ವಯಂ ಸೇವಾ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷ ಪುನೀತ್ ಸಾಳೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ರವೀಂದ್ರ ರತ್ನಾಕರ್, ಮಹಾಂತೇಶ ಭಜಂತ್ರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.