ADVERTISEMENT

ಬೀದರ್: ಅಕ್ಕ ಅನ್ನಪೂರ್ಣಗೆ ಸನ್ಮಾನ 

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2022, 11:21 IST
Last Updated 26 ಸೆಪ್ಟೆಂಬರ್ 2022, 11:21 IST
ಬೀದರ್‌ನ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ ಬಸವ ಸೇವಾ ಪ್ರತಿಷ್ಠಾನದ ಅಕ್ಕ ಅನ್ನಪೂರ್ಣ ಅವರನ್ನು ಸನ್ಮಾನಿಸಲಾಯಿತು
ಬೀದರ್‌ನ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ ಬಸವ ಸೇವಾ ಪ್ರತಿಷ್ಠಾನದ ಅಕ್ಕ ಅನ್ನಪೂರ್ಣ ಅವರನ್ನು ಸನ್ಮಾನಿಸಲಾಯಿತು   

ಬೀದರ್: ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಪುರಸ್ಕೃತ ಬಸವ ಸೇವಾ ಪ್ರತಿಷ್ಠಾನದ ಅಕ್ಕ ಅನ್ನಪೂರ್ಣ ಅವರ ಅಭಿನಂದನಾ ಕಾರ್ಯಕ್ರನ ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ ನಡೆಯಿತು.

ಇಳಕಲ್‍ದ ಗುರುಮಹಾಂತ ಸ್ವಾಮೀಜಿ ಕಾರ್ಯಕ್ರಮ ಉದ್ಘಾಟಿಸಿದರು. ಕೂಡಲಸಂಗಮದ ಬಸವ ಧರ್ಮ ಪೀಠಾಧ್ಯಕ್ಷೆ ಗಂಗಾದೇವಿ, ಬಸವಕಲ್ಯಾಣದ ಅನುಭವ ಮಂಟಪದ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು ಹಾಗೂ

ಹುಲಸೂರಿನ ಶಿವಾನಂದ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು.

ADVERTISEMENT

ಕಲಬುರಗಿಯ ಸಾರಂಗಧರೇಶ್ವರ ದೇಶಿಕೇಂದ್ರ ಸ್ವಾಮೀಜಿ ಅಕ್ಕಮಹಾದೇವಿ ಆಶ್ರಮದ ಪ್ರಭುಶ್ರೀ ಮಾತೆ, ಗೋರಚಿಂಚೋಳಿಯ ಸಿದ್ಧರಾಮೇಶ್ವರ ಪಟ್ಟದ್ದೇವರು, ಪ್ರಭುದೇವರು, ಬಿಜೆಪಿ ಮುಖಂಡ ಗುರುನಾಥ ಕೊಳ್ಳೂರ್, ರಮೇಶ ಕನಕಟ್ಟಾ, ಚಂದ್ರಶೇಖರ ಹೆಬ್ಬಾಳೆ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.