
ಪ್ರಜಾವಾಣಿ ವಾರ್ತೆ
ಹುಲಸೂರ: ತಾಲ್ಲೂಕಿನ ಬೇಲೂರ ಗ್ರಾಮದಲ್ಲಿ ಮಂಗಳವಾರ ರೈತ ಕಾಶಿನಾಥ್ ಬಿರಾದಾರ ಎಂಬುವರಿಗೆ ಸೇರಿದ ಹೊಲದಲ್ಲಿ ಬೆಂಕಿ ಹೊತ್ತಿಕೊಂಡು 6 ಎಕರೆ ಕಬ್ಬು ಸುಟ್ಟು ಹೋಗಿದೆ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿ ಈ ಘಟನೆ ಸಂಭವಿಸಿದೆ. ಗ್ರಾಮದ ಸರ್ವೇ ನಂಬರ್ 258 ರ 6 ಎಕರೆ ಜಮೀನಿನಲ್ಲಿ 14 ಅಡಿಗಳಷ್ಟು ಎತ್ತರ ಕಬ್ಬು ಬೆಳೆದಿತ್ತು. ಬೆಂಕಿ ತಗುಲಿದ ವಿಷಯ ತಿಳಿದು ಬಸವಕಲ್ಯಾಣ ಅಗ್ನಿಶಾಮಕ ಠಾಣೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು. ಆದರೆ, ಅಷ್ಟೊತ್ತಿಗೆ ಕಬ್ಬು ಸುಟ್ಟು ಕರಕಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.