ADVERTISEMENT

ಐಎಎಸ್–ಕೆಎಎಸ್ ಪರೀಕ್ಷೆ ತರಬೇತಿ: ಹೆಸರು ನೋಂದಣಿಗೆ ಜ17 ಕೊನೆದಿನ

​ಪ್ರಜಾವಾಣಿ ವಾರ್ತೆ
Published 13 ಜನವರಿ 2026, 8:09 IST
Last Updated 13 ಜನವರಿ 2026, 8:09 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಬೀದರ್: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕೇಂದ್ರ ಲೋಕ ಸೇವಾ ಆಯೋಗ (ಯುಪಿಎಸ್‌ಸಿ) ನಡೆಸುವ ಐಎಎಸ್ ಹಾಗೂ ಕರ್ನಾಟಕ ಲೋಕ ಸೇವಾ ಆಯೋಗ (ಕೆಪಿಎಸ್‌ಸಿ) ನಡೆಸುವ ಕೆಎಎಸ್ ಸೇರಿದಂತೆ ಇತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಚೇರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ.

ತರಬೇತಿಗೆ ಆಸಕ್ತ ಅಭ್ಯರ್ಥಿಗಳು ಜ17 ರೊಳಗಾಗಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದು. ಮಾಹಿತಿಗಾಗಿ ದೂ.0821-2515944 ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.