ADVERTISEMENT

ಬೀದರ್ | ಪರಿಸರ ದಿನಾಚರಣೆ ಜೂನ್ 26ಕ್ಕೆ

​ಪ್ರಜಾವಾಣಿ ವಾರ್ತೆ
Published 23 ಜೂನ್ 2025, 14:34 IST
Last Updated 23 ಜೂನ್ 2025, 14:34 IST

ಬೀದರ್: ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕದಿಂದ ಜೂನ್‌ 26ರಂದು ವಿಶ್ವ ಪರಿಸರ ದಿನಾಚರಣೆ ಮತ್ತು ಸಸಿ ವಿತರಣೆ ಕಾರ್ಯಕ್ರಮವನ್ನು ನಗರದ ಗಾಂಧಿ ಗಂಜ್‌ ಬಸವೇಶ್ವರ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಭಾತಂಬ್ರಾದ ಶಿವಯೋಗಿಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು.

ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿ ಮೃತ್ಯುಂಜಯ ಉದ್ಘಾಟಿಸುವವರು. ಹಿರಿಯ ಸಾಹಿತಿ ಬಸವರಾಜ ಬಲ್ಲೂರ ಅನುಭಾವ ನಡೆಸುವರು. ಬಸವರಾಜ ಧನ್ನೂರ್ ಅಧ್ಯಕ್ಷತೆ ವಹಿಸುವರು ಎಂದು ಜಾಗತಿಕ ಲಿಂಗಾಯತ ಮಹಾಸಭ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT