ADVERTISEMENT

ಹುಮನಾಬಾದ್| ಸುಳ್ಳು ಜಾತಿ ಪ್ರಮಾಣಪತ್ರ: ರೇಷ್ಮಾ ಶ್ರೀಧರ ಪುರಸಭೆ ಸದಸ್ಯತ್ವ ರದ್ದು

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2025, 12:32 IST
Last Updated 1 ಮಾರ್ಚ್ 2025, 12:32 IST
   

ಹುಮನಾಬಾದ್ (ಬೀದರ್‌ ಜಿಲ್ಲೆ) : ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸಿರುವುದು ರುಜುವಾತು ಆಗಿರುವುದರಿಂದ ಇಲ್ಲಿನ ಪುರಸಭೆ ಸದಸ್ಯೆ ರೇಷ್ಮಾ ಶ್ರೀಧರ ಅವರ ಸದಸ್ಯತ್ವವನ್ನು ರದ್ದುಗೊಳಿಸಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಆದೇಶ ಹೊರಡಿಸಿದ್ದಾರೆ.

ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸಿರುವ ಬಗ್ಗೆ ಜೆಡಿಎಸ್ ಮುಖಂಡ ಶಿವಪುತ್ರ ಮಾಳಗೆ ಎಂಬುವರು ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿದ್ದರು. ಈ ಬಗ್ಗೆ ಜಿಲ್ಲಾಧಿಕಾರಿ ವಿಚಾರಣೆ ನಡೆಸಿ, ಕರ್ನಾಟಕ ಪೌರಸಭೆಗಳ ಕಾಯ್ದೆ 1964ರ ಸೆಕ್ಷೆನ್‌ 41(1) ಅನ್ವಯ ಸದಸ್ಯತ್ವ ರದ್ದುಪಡಿಸಿ ಆದೇಶಿಸಿದ್ದಾರೆ.

‘ತಂದೆಯ ಜಾತಿ ಆಧರಿಸಿ ಅವರ ಮಕ್ಕಳಿಗೆ ಆ ಜಾತಿ ಪ್ರಮಾಣ ಪತ್ರ ನೀಡಲಾಗುತ್ತದೆ. ಆದರೆ, ಪತಿಯ ಜಾತಿ ಪತ್ನಿಗೆ ವರ್ಗಾವಣೆ ಆಗುವುದಿಲ್ಲ’ ಎಂದು ತಿಳಿಸಿದ್ದಾರೆ. 2019ರ ಚುನಾವಣೆಯಲ್ಲಿ ರೇಷ್ಮಾ ಆಯ್ಕೆಯಾಗಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.