ಹುಮನಾಬಾದ್ : ತಾಲ್ಲೂಕಿನ ಧುಮ್ಮನಸೂರ್ ಗ್ರಾಮದ ವ್ಯಾಪ್ತಿಯಲ್ಲಿನ ಸರ್ವೆ ನಂ.238ರಲ್ಲಿನ ಒಟ್ಟು 6. ಎಕರೆ 20 ಗುಂಟೆ ಅನಧಿಕೃತವಾಗಿ ಒತ್ತುವರಿ ಮಾಡಿಕೊಂಡಿರುವ ಜಮೀನನ್ನು ಅರಣ್ಯ ಇಲಾಖೆಯ ಸಿಬ್ಬಂದಿಗಳು ಸೋಮವಾರ ತೆರವುಗೊಳಿಸಿದರು.
ಧುಮ್ಮನಸೂರ್ ಗ್ರಾಮದ ಸರ್ವೆ ನಂ.238ರಲ್ಲಿನ ರಕ್ಷಿತಾರಣ್ಯ ಇಲಾಖೆಗೆ ಸೇರಿದ 6 ಎಕರೆ 20 ಗುಂಟೆ ಜಮೀನಿನಲ್ಲಿ ಸಂಗಮೇಶ ಚಿದ್ರಿ ಎಂಬುವವರು ಕಳೆದ ಐದು ವರ್ಷಗಳಿಂದ ಅನಧಿಕೃತವಾಗಿ ಒತ್ತುವರಿ ಮಾಡಿಕೊಂಡಿರುವುದನ್ನು ತೆರವು ಮಾಡಲಾಗಿದೆ. ಹುಮನಾಬಾದ್ ತಾಲ್ಲೂಕಿನಲ್ಲಿ ಇನ್ನೂ ಸಾಕುಷ್ಟು ಅರಣ್ಯ ಇಲಾಖೆಯ ಭೂಮಿ ಒತ್ತುವರಿ ಮಾಹಿತಿ ಇದೆ ಅದು ಸಹ ತೆರವು ಮಾಡಲಾಗುವುದು ಎಂದು ಜಿಲ್ಲಾ ಅರಣ್ಯಾಧಿಕಾರಿ ವಾನಂತಿ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.