ಹುಮನಾಬಾದ್: ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ನೀಡಿರುವುದನ್ನು ಖಂಡಿಸಿ ಕಾಂಗ್ರೆಸ್ ಪಕ್ಷದಿಂದ ಬೃಹತ್ ಪ್ರತಿಭಟನ ಮೆರವಣಿಗೆ ಜರುಗಿತು.
ಇಲ್ಲಿಯ ವೀರಭದ್ರೇಶ್ವರ ದೇವಸ್ಥಾನದಿಂದ ಆರಂಭಗೊಂಡ ಮೆರವಣಿಗೆ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದವರೆಗೆ ಜರುಗಿತು. ಟೈರ್‌ಗೆ ಬೆಂಕಿ ಹಚ್ಚಿ ಸುತ್ತಲೂ ಮಾನವ ಸರಪಳಿ ನಿರ್ಮಿಸಿ ಬಾಯಿ ಬಡಿದುಕೊಂಡು ಪ್ರತಿಭಟಿಸಿದರು.
ತಹಶೀಲ್ದಾರ್ ಅಂಜುಂ ತಬಸುಮ್ ಅವರ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು.
‘ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಕೆಲವು ಮುಖಂಡರು ಸಿದ್ದರಾಮಯ್ಯ ಅವರು ಯಾವುದೇ ಅಧಿಕಾರ ದುರುಪಯೋಗ ಮಾಡದಿದ್ದರೂ ಷಡ್ಯಂತ್ರ ಮಾಡುತ್ತಿದ್ದಾರೆ. ರಾಜ್ಯಪಾಲ ಈ ನಡೆ ಸಂವಿಧಾನ ಬಾಹಿರವಾಗಿದೆ’ ಎಂದು ರಾಷ್ಟ್ರಪತಿ ಅವರಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಈ ಸಂದರ್ಭದಲ್ಲಿ ಮಾಜಿ ಸಚಿವ ರಾಜಶೇಖರ ಪಾಟೀಲ, ವಿಧಾನ ಪರಿಷತ್ ಸದಸ್ಯ ಭೀಮಾರಾವ್ ಪಾಟೀಲ , ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಅಭಿಷೇಕ ಪಾಟೀಲ, ತಾ.ಪಂ ಮಾಜಿ ಅಧ್ಯಕ್ಷ ರಮೇಶ ಡಾಕುಳಗಿ, ತಾಪಂ ಮಾಜಿ ಸದಸ್ಯರಾದ ಬಾಬು ಟೈಗರ್, ಶ್ರೀಮಂತ ಪಾಟೀಲ ತಾಳಮಡಗಿ, ದತ್ತಕುಮಾರ ಚಿದ್ರಿ, ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಓಂಕಾರ ತುಂಬಾ, ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಉಮೇಶ್ ಜಮಗಿ, ಆನಂದ ಖಂಡಗೊಂಡ ಜಲಸಂಗಿ, ರಾಹಿಲ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.