
ಹುಮನಾಬಾದ್: ಪಟ್ಟಣದ ಹೊರವಲಯದ ಕೈಗಾರಿಕಾ ಪ್ರದೇಶದ ಖಾಲಿ ನಿವೇಶನದಲ್ಲಿನ ತ್ಯಾಜ್ಯಕ್ಕೆ ಬುಧವಾರ ಮಧ್ಯಾಹ್ನ ಆಕಸ್ಮಿಕ ಬೆಂಕಿ ತಗುಲಿದ್ದರಿಂದ ದಟ್ಟು ಹೊಗೆ ಕಾಣಿಸಿಕೊಂಡಿತ್ತು.
ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಟ್ಟರು. ಯಾವುದೇ ಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಧಿಕಾರಿಗಳ ಭೇಟಿ: ಸ್ಥಳಕ್ಕೆ ತಹಶೀಲ್ದಾರ್ ಅಂಜುಂ ತಬಸುಮ್ , ಡಿವೈಎಸ್ಪಿ ಮಡೋಳ್ಳಪ್ಪ , ಸಿಪಿಐ ಸಂತೋಷ, ಪಿಎಸ್ಐ ಸುರೇಶಕುಮಾರ ಚೌಹಾಣ್, ಪರಿಸರ ಮಾಲಿನ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪರಿಸರ ಮಾಲಿನ್ಯ ಅಧಿಕಾರಿಗಳು ನೀಡುವ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಳ್ಳಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.